ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದರ ಬೆನ್ನಲ್ಲಿ ಅವರಿಗೆ ಮತ್ತೊಂದು ಶಾಕ್ ಎದುರಾಗಿದ್ದು ಬಿಜೆಪಿ ಎಂಎಲ್ಸಿ ಅರುಣ್, ಹಣ ದುರ್ಬಳಕೆ ಆರೋಪದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು ಸಲ್ಲಿಸಿದ್ದಾರೆ.
ಹೌದು ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ರಾಜ್ಯಪಾಲರಿಗೆ ಬಿಜೆಪಿ ಎಂಎಲ್ಸಿ ಅರುಣ್ ಎನ್ನುವರು ದೂರು ಕೊಟ್ಟಿದ್ದಾರೆ. ಹಣ ದುರುಪಯೋಗದ ಬಗ್ಗೆ ದೂರು ದಾಖಲಿಸಿದ್ದಾರೆ. 1,494 ಕೋಟಿ ರೂಪಾಯಿ ಬಗ್ಗೆ ಮಾಹಿತಿಯನ್ನು ಕೊಟ್ಟಿಲ್ಲ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳಲ್ಲಿ ಇದು ಬಾಕಿ ಉಳಿದಿದೆ.
ಬಾಕಿ ಉಳಿದ ಹಣದ ಮಾಹಿತಿ ನೀಡದಿರುವ ಬಗ್ಗೆ ಅರುಣ್ ಅವರು ದೂರು ನೀಡಿದ್ದಾರೆ. ಸರ್ಕಾರಕ್ಕೆ ಪತ್ರ ಬರೆದಿದ್ದರು ಯಾವುದೇ ಮಾಹಿತಿಯನ್ನು ನೀಡಿಲ್ಲ. ಈ ಹಣ ಎಲ್ಲಿದೆ? ಸರ್ಕಾರದ ಖಜಾನೇಯಲ್ಲೂ ಇಲ್ಲ. ಈ ಬಗ್ಗೆ ತನಿಖೆ ನಡೆಸುವಂತೆ ಎಂಎಲ್‌ಸಿ ಅರುಣವರು ದೂರಿನಲ್ಲಿ ಮನವಿ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.