ಬೆಂಗಳೂರು: ನಗರದ ಪ್ರಮುಖ ರಸ್ತೆಯಾಗಿರುವಂತ ಹೆಬ್ಬಾಳ ಮೇಲ್ಸೇತುವೆ ಬಳಿಯಲ್ಲಿ ಸದಾ ಟ್ರಾಫಿಕ್ ಜಾಮ್ ಕಿರಿಕಿರಿ. ವಾಹನ ಸವಾರರು ಯಾವಾಗ್ಲೂ ಇದನ್ನು ಅನುಭವಿಸಿಯೇ ಇರುತ್ತಾರೆ. ಶೀಘ್ರವೇ ಈ ಟ್ರಾಫಿಕ್ ಜಾಮ್ ಕಿರಿಕಿರಿಗೆ ಮುಕ್ತಿ ದೊರೆಯಲಿದೆ. ಇದಕ್ಕಾಗಿ ಭೂಗತ ವಾಹನ ಸುರಂಗ ಮಾರ್ಗವನ್ನು ನಿರ್ಮಾಣ ಮಾಡಲಾಗುತ್ತಿದೆ.
ಬೆಂಗಳೂರು ನಗರದ ಹೆಬ್ಬಾಳ ಮೇಲ್ಸೇತುವೆ ಪ್ರದೇಶದಿಂದ ಹೊಸೂರು ರಸ್ತೆಯ ಸಿಲ್ಕ್ ಬೋರ್ಡ್ ಜಂಕ್ಷನ್ನ ಮೇಲ್ಸೇತುವೆಯವರೆಗೆ ಭೂಗತ ವಾಹನ ಸುರಂಗ ಮಾರ್ಗವನ್ನು ನಿರ್ಮಿಸುವ ಯೋಜನೆಗೆ ಗುರುವಾರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಈ ಯೋಜನೆಯ ಅಂದಾಜು ವೆಚ್ಚ ₹12,690 ಕೋಟಿ.
ಈ ಬಗ್ಗೆ ಮಾಹಿತಿ ನೀಡಿರುವ ಕಾನೂನು ಸಚಿವ ಎಚ್.ಕೆ.ಪಾಟೀಲ್, “ಬೆಂಗಳೂರು ನಗರದ ವಾಹನ ದಟ್ಟಣೆ ನಿವಾರಿಸಲು ಇದೊಂದು ಉತ್ತಮ ಯೋಜನೆ. ಸುಮಾರು 190 ಕಿ.ಮೀ ಉದ್ದದ ವಾಹನ ದಟ್ಟಣೆಯ 11 ಕಾರಿಡಾರ್ಗಳನ್ನು ಆಯ್ಕೆ ಮಾಡಿ, ಭೂಗತ ವಾಹನ ಸುರಂಗ ಮಾರ್ಗ ಸೂಕ್ತವೆಂದು ಅಭಿಪ್ರಾಯಪಡಲಾಗಿದೆ. ಅಲ್ಲದೇ ಬೆಂಗಳೂರು ಹೃದಯ ಭಾಗದಲ್ಲಿ ಒಟ್ಟು ಸುಮಾರು 99.50 ಕಿ.ಮೀ. ಉದ್ದದ 17 ಮೇಲ್ಸೇತುವೆ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ. ಇದಕ್ಕೆ ಸಮಗ್ರ ಯೋಜನಾ ವರದಿ ಸಿದ್ಧಪಡಿಸಬೇಕಿದೆ ಎಂದು ಅವರು ತಿಳಿಸಿದ್ದಾರೆ.
ಬೆಂಗಳೂರು ನಗರದ ಹೆಬ್ಬಾಳ ಮೇಲ್ಸೇತುವೆ ಪ್ರದೇಶದಿಂದ ಹೊಸೂರು ರಸ್ತೆಯ ಸಿಲ್ಕ್ ಬೋರ್ಡ್ ಜಂಕ್ಷನ್ನ ಮೇಲ್ಸೇತುವೆಯವರೆಗೆ ಭೂಗತ ವಾಹನ ಸುರಂಗ ಮಾರ್ಗವನ್ನು ನಿರ್ಮಿಸುವ ಯೋಜನೆಗೆ ಗುರುವಾರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಈ ಯೋಜನೆಯ ಅಂದಾಜು ವೆಚ್ಚ ₹12,690 ಕೋಟಿ.
ಈ ಬಗ್ಗೆ ಮಾಹಿತಿ ನೀಡಿರುವ ಕಾನೂನು ಸಚಿವ ಎಚ್.ಕೆ.ಪಾಟೀಲ್, “ಬೆಂಗಳೂರು… pic.twitter.com/hXTGZ8JCFW
— DIPR Karnataka (@KarnatakaVarthe) August 23, 2024
ಬೆಂಗಳೂರು ಜನತೆ ಗಮನಕ್ಕೆ: ಆ.25ರಂದು ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut