ಮಂಡ್ಯ : 12 ವರ್ಷದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿದ್ದ ಅಪರಾಧಿಗೆ ಪೋಕ್ಸೊ ಕಾಯ್ದೆಯಡಿ 20 ವರ್ಷಗಳ ಕಠಿಣ ಶಿಕ್ಷೆ ಮತ್ತು 25 ಸಾವಿರ ದಂಡವನ್ನು ಮಂಡ್ಯ ನಗರದ (ಪೋಕ್ಸೊ ವಿಶೇಷ) ನ್ಯಾಯಾಲಯದ ನ್ಯಾಯಾಧೀಶರಾದ ಮಂಜುಳಾ ಇಟ್ಟಿ ತೀರ್ಪು ನೀಡಿದ್ದಾರೆ.
ಮದ್ದೂರು ಪಟ್ಟಣದ ಸೋಮೇಗೌಡರ ಬೀದಿಯ ನಿವಾಸಿ ಸುನಿಲ್‌ಕುಮಾರ್ (28) ಬಿನ್ ಬಸಪ್ಪ ಎಂಬಾತ 12 ವರ್ಷದ ಬಾಲಕಿಯನ್ನು ಪುಸಲಾಯಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿದ ಪರಿಣಾಮ ಬಾಲಕಿ ಗರ್ಭಿಣಿಯಾಗಿದ್ದಳು.
ಆರೋಪಿ ವಿರುದ್ಧ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ಇನ್‌ಸ್ಪೆಕ್ಟರ್ ಸಂತೋಷ್ ಅವರು ಸಮಗ್ರ ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ನೊಂದ ಬಾಲಕಿಗೆ 10.50 ಲಕ್ಷ ಪರಿಹಾರ ನೀಡುವಂತೆ ಆದೇಶಿಸಲಾಗಿದ್ದು, ವಿಶೇಷ ಸರ್ಕಾರಿ ಅಭಿಯೋಜಕರಾದ ಎಂ.ಜೆ.ಪೂರ್ಣಿಮಾ ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.
ವರದಿ : ಗಿರೀಶ್ ರಾಜ್, ಮಂಡ್ಯ
ಬೆಂಗಳೂರಿನ ಈ ರಸ್ತೆಯಲ್ಲಿ ‘ಟ್ರಾಫಿಕ್ ಜಾಮ್’ಗೆ ಮುಕ್ತಿ: ಭೂಗತ ವಾಹನ ‘ಸುರಂಗ ಮಾರ್ಗ’ ನಿರ್ಮಾಣ
ಬೆಂಗಳೂರು ಜನತೆ ಗಮನಕ್ಕೆ: ಆ.25ರಂದು ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut