ಶಿವಮೊಗ್ಗ: ಶಿವಮೊಗ್ಗ ಮೆಸ್ಕಾಂ ನಗರ ಉಪ ವಿಭಾಗ-1, ಘಟಕ-1ರ ವ್ಯಾಪ್ತಿಯಲ್ಲಿ 11 ಕೆವಿ ಮಾಗ್ ಬದಲಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ದಿ: 25/08/2024 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ಊರಗಡೂರು, ಸೂಳೆಬೈಲು, ಮದಾರಿಪಾಳ್ಯ, ಮಳಲಿಕೊಪ್ಪ, ಬೈಪಾಸ್ ರಸ್ತೆ, ವಾದಿ-ಎ-ಹುದಾ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಭದ್ರಾವತಿ: ದೀಕ್ಷಾ ಭೂಮಿ ಭೇಟಿಗೆ ಅರ್ಜಿ ಆಹ್ವಾನ
2024-25ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಡಾ. ಬಿ.ಆರ್. ಅಂಬೇಡ್ಕರ್ ಅನುಯಾಯಿಗಳು ಮಹಾರಾಷ್ಟ್ರದ ನಾಗಪುರದಲ್ಲಿನ ದೀಕ್ಷಾ ಭೂಮಿಗೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಬಸ್‌ಗಳ ವ್ಯವಸ್ಥೆಯನ್ನು ಕಲ್ಪಿಸುವ ಸಂಬxಧ ಸಮಾಜ ಕಲ್ಯಾಣ ಇಲಾಖೆಯ ವೆಬ್ಸೈಟ್ ಲಿಂಕ್ https://swdservices.karnataka.gov.in ಮೂಲಕ ಅರ್ಜಿಯನ್ನು ಆ.31 ರೊಳಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಭದ್ರಾವತಿ, ದೂ.ಸಂ. : 08282-263761 ನ್ನು ಸಂಪರ್ಕಿಸುವುದು.
ಲಿಡ್ಕರ್ ಸಾರ್ವಜನಿಕ ಕುಂದುಕೊರತೆ ಸಭೆ
ಡಾ.ಬಾಬು ಜಗಜೀವನ ರಾಮ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ವ್ಯಾಪ್ತಿಗೆ ಒಳಪಡುವ ಚರ್ಮ ಕುಶಲಕರ್ಮಿಗಳು/ವಿವಿಧ ಸಂಘ ಸಂಸ್ಥೆಗಳ ಕುಂದು ಕೊರತೆ ಸಭೆಯನ್ನು ಆ.30 ರಂದು ಸರ್ಕಾರಿ ಕಚೇರಿ ವೇಳೆಯಲ್ಲಿ ನಿಗಮದ ಡಾ. ಬಾಬು ಜನಜೀವನ ರಾಂ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ನಿಗಮದ ವ್ಯಾಪ್ತಿಗೆ ಒಳಪಡುವವರು ತಮ್ಮ ಕುಂದುಕೊರತೆಯನ್ನು ಮೌಖಿಕವಾಗಿ ಅಥವಾ ಲಿಖಿತವಾಗಿ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಂಯೋಜಕರು, ಲಿಡ್‌ಕರ್, ನೆಹರು ರಸ್ತೆ, ಶಿವಮೊಗ್ಗ, ದೂ.ಸಂ.: 8762883941 ನ್ನು ಸಂಪರ್ಕಿಸುವಂತೆ ಜಿಲ್ಲಾ ಸಂಯೋಜಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಮಂಡ್ಯದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಅಪರಾಧಿ 20 ವರ್ಷಗಳ ಕಠಿಣ ಶಿಕ್ಷೆ
ಬೆಂಗಳೂರು ಜನತೆ ಗಮನಕ್ಕೆ: ಆ.25ರಂದು ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut