ಬೆಂಗಳೂರು: ಮುಡಾ ಹಗರಣದ ವಿಚಾರದಲ್ಲಿ ರಾಜ್ಯಪಾಲರು ಸ್ವಂತ ವಿವೇಚನೆಯಿಂದ ನಡೆದುಕೊಂಡಿಲ್ಲ. ರಾಜಭವನ ಈಗ ಬಿಜೆಪಿ ಕಚೇರಿಯಾಗಿದೆ. ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಅವರ ತಪ್ಪೇನೂ ಇಲ್ಲ ಎಂದು ಎಂ ಬಿ ಪಾಟೀಲ ಹೇಳಿದ್ದಾರೆ.
ಸದಾಶಿವನಗರದ ನಿವಾಸದಲ್ಲಿ ತಮ್ಮನ್ನು ಭೇಟಿ ಮಾಡಿದ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಮುಡಾ ಹಗರಣದ ನೆಪದಲ್ಲಿ ಸರಕಾರವನ್ನು ಉರುಳಿಸಲು ಬಿಜೆಪಿ ಮತ್ತು ಜೆಡಿಎಸ್ ನೋಡುತ್ತಿವೆ. ಆದರೆ ಅವರು ತಲೆ ಕೆಳಗೆ ಮಾಡಿಕೊಂಡು ನಿಂತರೂ ಅದು ಸಾಧ್ಯವಿಲ್ಲ. ನಮ್ಮ ಪಕ್ಷದ ಹೈಕಮಾಂಡ್ ಈ ವಿಚಾರದಲ್ಲಿ ಕೆಲವು ಸಲಹೆ ಸೂಚನೆ ನೀಡಲಿದೆ ಎಂದು ಅವರು ನುಡಿದಿದ್ದಾರೆ.
ಟಿ ಜೆ ಅಬ್ರಹಾಂ ನೀಡಿದ ದೂರಿನ ಮೇರೆಗೆ ತರಾತುರಿಯಲ್ಲಿ ಕ್ರಮ ಕೈಗೊಂಡ ರಾಜ್ಯಪಾಲರು, ಶಶಿಕಲಾ ಜೊಲ್ಲೆ, ಮುರುಗೇಶ ನಿರಾಣಿ, ಜನಾರ್ದನ ರೆಡ್ಡಿ ಮತ್ತು ಎಚ್ ಡಿ ಕುಮಾರಸ್ವಾಮಿ ವಿಚಾರದಲ್ಲಿ ವರ್ಷಗಳೇ ಉರುಳಿದರೂ ಏಕೆ ಸುಮ್ಮನಿದ್ದಾರೆ ಎಂದು ಅವರು ಪ್ರಶ್ನಿಸಿದರು.
ಶೀಘ್ರವೇ ಮೆಡಿಕಲ್ ಕಾಲೇಜುಗಳಿಗೆ ಮಾರ್ಗಸೂಚಿ ಪ್ರಕಟ: ಸಚಿವ ಶರಣ ಪ್ರಕಾಶ್ ಪಾಟೀಲ್