ಬೆಂಗಳೂರು : ಮಳೆ ಹೆಚ್ಚಾಗಿದ್ದರಿಂದ ಇದೀಗ ರಾಜ್ಯದಲ್ಲಿ ಡೆಂಗ್ಯೂ ಆರ್ಭಟಿಸುತ್ತಿದೆ. ಸದ್ಯ ರಾಜ್ಯದಲ್ಲಿ ಡೆಂಗ್ಯೂ ಸೋಂಕಿತರ ಪ್ರಕರಣಗಳು 23,163 ಏರಿಕೆ ಆಗಿದೆ.ಇನ್ನೂ ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳು 10 ಸಾವಿರ ಗಡಿ ದಾಟಿದೆ.
ಹೌದು ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 199 ಡೆಂಗ್ಯೂ ಪ್ರಕರಣಗಳು ಪತ್ತೆ ಆಗಿದ್ದು, 1182 ಸಕ್ರಿಯ ಪ್ರಕರಣಗಳಿವೆ.ಇಡಿ ದೇಶದಲ್ಲೇ ಡೆಂಗ್ಯೂ ಪ್ರಕರಣಗಳು ಹೆಚ್ಚು ಇರುವ ಸಿಟಿಗಳಲ್ಲಿ ಬೆಂಗಳೂರು ಕೂಡಾ ಒಂದಾಗಿದೆ. ಈ ಹಿನ್ನೆಲೆ ಆರೋಗ್ಯ ಇಲಾಖೆಯ ಟೆನ್ಷನ್ಗೆ ಕಾರಣವಾಗಿದೆ.
ಸಾವಿರಾರು ಗಡಿದಾಟಿ ಡೆಂಗ್ಯೂ ಪ್ರಕರಣ ಮುನ್ನುಗುತ್ತಿದೆ. ಈ ಮಧ್ಯೆ ಬೆಂಗಳೂರಿನ ಜಿಗಣಿ ಪ್ರದೇಶದಲ್ಲಿ ಐವರಲ್ಲಿ ಝೀಕಾ ವೈರಸ್ ಸೋಂಕು ಪತ್ತೆಯಾಗಿದೆ. ಝೀಕಾ ವೈರಸ್ ಪತ್ತೆ ಹಿನ್ನೆಲೆಯಲ್ಲಿ ಜಿಗಣಿ ಪ್ರದೇಶವನ್ನು ಕಂಟೋನ್ಮೆಂಟ್ ಜೋನ್ ಎಂದು ಘೋಷಣೆ ಮಾಡಲಾಗಿದೆ.