ಶಿವಮೊಗ್ಗ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಗೊಲ್ಲರ(ಯಾದವ)ಸಂಘ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಆ.26 ರ ಬೆಳಿಗ್ಗೆ 11 ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ಶ್ರೀ ಕೃಷ್ಣ ಜಯಂತಿಯನ್ನು ಏರ್ಪಡಿಸಲಾಗಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಇವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ತಂಗಡಗಿ ಶಿವರಾಜ್ ಸಂಗಪ್ಪ ಇವರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು.
ಶಾಸಕರಾದ ಎಸ್.ಎನ್.ಚನ್ನಬಸಪ್ಪ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು, ಜಿಲ್ಲಾ, ತಾಲ್ಲೂಕು ಗೊಲ್ಲರ ಸಂಘದ ಅಧ್ಯಕ್ಷರು, ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು, ಪಾಲಿಕೆ ಆಯುಕ್ತರು, ಅಧಿಕಾರಿಗಳು, ವಿವಿಧ ಸಂಘಟನೆ ಮುಖಂಡರು ಪಾಲ್ಗೊಳ್ಳುವರು. ಅಜ್ಜಂಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕರಾದ ಮಹಾಲಿಂಗಪ್ಪ.ಈ ವಿಶೇಷ ಉಪನ್ಯಾಸ ನೀಡುವರು.
KSRTC ಉಪಾಧ್ಯಕ್ಷರಾಗಿ ಮಹಮ್ಮದ್ ರಿಜ್ವಾನ್ ನವಾಬ್ ಅಧಿಕಾರ ಸ್ವೀಕಾರ | KSRTC News
‘ಮುಡಾ ಹಗರಣ’ದ ವಿಚಾರದಲ್ಲಿ ‘ರಾಜಭವನ’ ಈಗ ‘ಬಿಜೆಪಿ ಕಚೇರಿ’ಯಾಗಿದೆ: ಸಚಿವ ಎಂ.ಬಿ ಪಾಟೀಲ್ ಕಿಡಿ
‘ಬಿಜೆಪಿ’ಯವರ ಮಾತು ಕೇಳಿ ’15 ಬಿಲ್’ಗಳನ್ನು ರಾಜ್ಯಪಾಲರು ವಾಪಾಸ್ ಕಳುಹಿಸಿದ್ದಾರೆ: ಡಿ.ಕೆ ಶಿವಕುಮಾರ್ ಕಿಡಿ