ಬೆಂಗಳೂರು : ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎಸ್ಐಟಿ ಅಧಿಕಾರಿಗಳು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಮೊದಲ ಚಾರ್ಜ್ ಶೀಟ್ ಅನ್ನು ಸಲ್ಲಿಸಿದ್ದಾರೆ.
ಹೌದು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ವಿರುದ್ಧ ಮೊದಲ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ತನಿಖೆ ನಡೆಸಿದ ಎಸ್ಐಟಿ ಅಧಿಕಾರಿಗಳು ದೋಷಾರೋಪಣೆ ಪಟ್ಟಿಯನ್ನು ಸಲ್ಲಿಸಿದ್ದಾರೆ. ಸುಮಾರು 2000 ಪುಟಗಳಷ್ಟು ದೋಷಾರೋಪಣೆ ಪಟ್ಟಿಯನ್ನು ಇದೀಗ ಎಸ್ಐಟಿ ಅಧಿಕಾರಿಗಳು ಸಲ್ಲಿಸಿದ್ದಾರೆ.
ಅಲ್ಲದೆ 123 ಸಾಕ್ಷಿಗಳನ್ನು ಸಂಗ್ರಹಿಸಿ ದೋಷಾರೋಪಣೆ ಪಟ್ಟಿ ಸಲ್ಲಿಸಲಾಗಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಎಸ್ಐಟಿ ಅಧಿಕಾರಿಗಳು ಪ್ರಕರಣದ ಸಂಪೂರ್ಣ ವರದಿ ಕುರಿತು ಇದೀಗ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.