ಹುಬ್ಬಳ್ಳಿ : ಬಿಜೆಪಿ ಅಧಿಕಾರ ಅವಧಿಯಲ್ಲಿ ನಡೆದಂತಹ ಹಗರಣಗಳ ಕುರಿತಂತೆ ಸಿಎಂ ಸಿದ್ದರಾಮಯ್ಯನವರೇ ಸ್ವತಃ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಕೇಸ್ ಪಟ್ಟಿ ಮಾಡಲು ಹೇಳಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೇ ವಿಜಯೇಂದ್ರ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಿ.ವೈ ವಿಜಯೇಂದ್ರ ಸಿಎಂ ಬದಲಾವಣೆ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ಇಲ್ಲದಿದ್ದರೆ ಶಾಸಕರ ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸ ಮಾಡುತ್ತಿರಲಿಲ್ಲ ಎಂದು ಹುಬ್ಬಳ್ಳಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವಿ ವಿಜಯೇಂದ್ರ ಹೇಳಿಕೆ ನೀಡಿದರು.
ನಿನ್ನೆ ವಿಶ್ವಾಸಕ್ಕೆ ತೆಗೆದುಕೊಂಡಿದ್ದನ್ನ ನೋಡಿದರೆ ಇದು ಸತ್ಯ ಅನಿಸುತ್ತದೆ. ನಾನು ಬಂಡೆಗಲ್ಲಿನಂತೆ ನಿಲ್ಲುತ್ತೇನೆ ಅಂತ ಡಿಸಿಎಂ ಡಿಕೆ ಶಿವಕುಮಾರ್ ಅಂದಿದ್ದರು. ಈ ಒಂದು ಹೇಳಿಕೆ ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಮುಡಾದಲ್ಲಿ ಸಾಕಷ್ಟು ಅವ್ಯವಹಾರವಾಗಿದೆ. ಸಿಎಂ ಬದಲಾವಣೆಯ ಕಾಲ ಸನ್ನಿಹಿತವಾಗಿದೆ ಎಂದರು.
ಸಿಎಂ ರಾಜೀನಾಮೆ ಕೊಡುತ್ತಾರೆ ಇದರಲ್ಲಿ ಯಾವುದೇ ಅನುಮಾನ ಬೇಡ. ಮುಡ ಹಗರಣ, ವಾಲ್ಮೀಕಿ ಹಗರಣದಲ್ಲೂ ಕೂಡ ಸಿಎಂ ನೇರವಾಗಿ ಭಾಗಿಯಾಗಿದ್ದಾರೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟೆ ಕೊಡ್ತಾರೆ. ಸರ್ಕಾರ ಬಂದು 18 ತಿಂಗಳಾದರೂ ಕೂಡ ಉತ್ತರ ಕರ್ನಾಟಕದ ಬಗ್ಗೆ ಕಿಂಚಿತ್ತು ಕಾಳಜಿ ಇಲ್ಲ. ರೈತರ ಪರವಾದ ಕಾಳಜಿ ಇಲ್ಲ ಇದು ನಿಷ್ಕ್ರಿಯ ಸರ್ಕಾರ ಎಂದು ವಾಗ್ದಾಳಿ ನಡೆಸಿದರು.
ಕರ್ನಾಟಕದ ಜನತೆಗೆ ಕಾಂಗ್ರೆಸ್ ಸರಕಾರ ಇದ್ದು ಸತ್ತಂತೆ. ನಮ್ಮ ಕುಟುಂಬದ ಬಗ್ಗೆ ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ. ಸಚಿವ ದಿನೇಶ್ ಗುಂಡೂರಾವ್ ಬಳಿ ದಾಖಲೆ ಇದ್ದರೆ ಕೊಡಲಿ. ಎಲ್ಲವೂ ಯುಪಿಎ ಕಾಲದಲ್ಲಿಯೇ ಆಗಿದ್ದು. ಎಲ್ಲವೂ ಇತ್ಯರ್ಥ ಆಗಿವೆ.ಯಾರು ಯಾರನ್ನು ಮುಗಿಸುತ್ತಾರೆಂದು ನೋಡೋಣ ಎಂದು ಬಿ ವೈ ವಿಜಯೇಂದ್ರ ಹೇಳಿಕೆ ನೀಡಿದರು.