ನವದೆಹಲಿ : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಇಂದು ದೆಹಲಿಯಲ್ಲಿ ಎಐಸಿಸಿ ಕಚೇರಿಯಲ್ಲಿ ಹೈಕಮಾಂಡ್ ಭೇಟಿಯಾಗಿ ಚರ್ಚಿಸಿದರು. ಹೈಕಮಾಂಡ್ ಜೊತೆಗೆ ಚರ್ಚೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನಾವು ಈ ನೆಲದ ಕಾನೂನಿನ ಮೇಲೆ ನಂಬಿಕೆ ಇಟ್ಟಿದ್ದೇವೆ ಎಂದು ತಿಳಿಸಿದರು.
ಹೌದು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಯಲ್ಲಿ ಎಐಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಭೇಟಿ ಮಾಡಿ ಸಭೆ ನಡೆಸಿದರು. ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾನು ಹೈಕಮಾಂಡ್ ನಾಯಕರಿಗೆ ಧನ್ಯವಾದ ಹೇಳುತ್ತೇನೆ. ಹೈಕಮಾಂಡ್ಗೆ ರಾಜ್ಯದ ಪರಿಸ್ಥಿತಿ ಬಗ್ಗೆ ವಿವರಣೆ ನೀಡಿದ್ದೇನೆ. ನಮಗೆ ಕೋರ್ಟ್ ನಲ್ಲಿ ನಂಬಿಕೆ ಇದೆ ರಾಜ್ಯಪಾಲರ ನಡೆಸಂವಿಧಾನಿಕವಾಗಿದೆ ಎಂದು ಹೈಕಮಾಂಡ್ ಸಭೆಯ ಬಳಿಕ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದರು.
ಇನ್ನು ಈ ಒಂದು ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎ ಐ ಸಿ ಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್, ಕರ್ನಾಟಕ ರಾಜ್ಯ ಉಸ್ತುವಾರಿ ರಣದೀಪ ಸಿಂಗ್ ಸುರ್ಜೆವಾಲಾ, ಡಿಸಿಎಂ ಡಿಕೆ ಶಿವಕುಮಾರ್, ಸಚಿವರಾದ ಕೆಜೆ ಜಾರ್ಜ್ ಪ್ರಿಯಾಂಕ ಖರ್ಗೆ ಸೇರಿದಂತೆ ಹಲವು ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು.