ಬೆಂಗಳೂರು: ರಾಜ್ಯದ ವಸತಿ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ, ಸರ್ಕಾರದಿಂದ ವಿದ್ಯಾರ್ಥಿಗಳಲ್ಲಿ ವಿಜ್ಞಾನ ಕಲಿಕೆಯ ಆಸಕ್ತಿ ಹೆಚ್ಚಿಸುವ ನಿಟ್ಟಿನಲ್ಲಿ ದೂರದರ್ಶಕ ಪೂರೈಕೆ ಮಾಡಲಾಗುತ್ತಿದೆ.
ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್ ಎಸ್ ಭೋಸರಾಜು ಅವರು, ವಿದ್ಯಾರ್ಥಿಗಳಲ್ಲಿನ ವಿಜ್ಞಾನ ಕ್ಷೇತ್ರದ ಬಗ್ಗೆ ಆಸಕ್ತಿ ಹೆಚ್ಚಿಸಲು ಹಾಗೂ ವೈಜ್ಞಾನಿಕ ಮನೋಭಾವವನ್ನು ಬೆಳೆಸಲು ರಾಜ್ಯದ 833 ವಸತಿ ಶಾಲೆಗಳಿಗೆ ದೂರದರ್ಶಕಗಳನ್ನು ಪೂರೈಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ವಿದ್ಯಾರ್ಥಿಗಳು ವಿಜ್ಞಾನವನ್ನು ಚಟುವಟಿಕೆಯ ಮೂಲಕ ಕಲಿಯಲು ಅನುವು ಮಾಡಿಕೊಡುವ ಸ್ಟ್ರೀಮ್ ಲ್ಯಾಬ್ ಗಳನ್ನು ಪ್ರಾರಂಭಕ್ಕೂ ಯೋಜನೆ ರೂಪಿಸುತ್ತಿದ್ದೇವೆ. ಇದರಿಂದ ವಿದ್ಯಾರ್ಥಿಗಳ ಪ್ರಾಯೋಗಿಕ ಜ್ಞಾನ ಹಾಗೂ ಅರ್ಥ ಮಾಡಿಕೊಳ್ಳುವ ಶಕ್ತಿ ಇನ್ನಷ್ಟು ಮೊನಚಾಗುತ್ತದೆ ಎಂದು ಹೇಳಿದ್ದಾರೆ.
ಸೂರ್ಯನ ಅಧ್ಯಯನಕ್ಕೆ ತೆರಳಿರುವ ಆದಿತ್ಯ ಎಲ್–1 ಉಪಗ್ರಹದ ಪ್ರತಿಕೃತಿಯನ್ನು ತಾರಾಲಯದ ಆವರಣದಲ್ಲಿ ಅಳವಡಿಸಲಾಗುತ್ತಿದೆ. ಈ ಸಂಬಂಧ ಇಸ್ರೊ ಜೊತೆ ಈಗಾಗಲೇ ತಾರಾಲಯದ ಅಧಿಕಾರಿಗಳು ಮಾತುಕತೆ ನಡೆಸಿದ್ದಾರೆ. ಆವರಣದಲ್ಲಿ ಜಾಗ ಸಿದ್ದಗೊಂಡ ಬಳಿಕ ಪ್ರತಿಕೃತಿಯನ್ನು ತಂದು ಅಳವಡಿಸಲಾಗುತ್ತದೆ ಎಂದು ವಿವರಿಸಿದರು.
ತಾರಾಲಯದ ಆವರಣದಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ ಬೋಧನಾ ಕೊಠಡಿಗಳು, ಆಡಿಯೊ, ವಿಡಿಯೊ ವಿಶ್ಯುವಲ್ ಉಪಕರಣಗಳನ್ನು ಅಳವಡಿಸಿರುವ ಕಟ್ಟಡ ನಿರ್ಮಾಣವಾಗುತ್ತಿದೆ. ಇದು ಅಂತಿಮ ಹಂತದಲ್ಲಿದ್ದು, ಮುಂದಿನ ತಿಂಗಳು ಉದ್ಘಾಟಿಸಲು ಅಗತ್ಯ ಸಿದ್ಧತೆ ನಡೆಸಲಾಗಿದೆ ಎಂದರು.
ವಿದ್ಯಾರ್ಥಿಗಳಲ್ಲಿ ವಿಜ್ಞಾನ ಕ್ಷೇತ್ರದ ಬಗ್ಗೆ ಆಸಕ್ತಿ ಹೆಚ್ಚಿಸಲು ಹಾಗೂ ವೈಜ್ಞಾನಿಕ ಮನೋಭಾವವನ್ನು ಬೆಳೆಸಲು ರಾಜ್ಯದ 833 ವಸತಿ ಶಾಲೆಗಳಿಗೆ ದೂರದರ್ಶಕಗಳನ್ನು ಪೂರೈಸಲಾಗುತ್ತಿದೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಭೋಸರಾಜು ತಿಳಿಸಿದ್ದಾರೆ.@CMofKarnataka @siddaramaiah @NsBoseraju pic.twitter.com/DxiO5ilXkK
— DIPR Karnataka (@KarnatakaVarthe) August 24, 2024
2027ಕ್ಕೆ ‘ಎತ್ತಿನಹೊಳೆ ಯೋಜನೆ’ ಪೂರ್ಣ: ಡಿಸಿಎಂ ಡಿ.ಕೆ ಶಿವಕುಮಾರ್ ಘೋಷಣೆ