ಬೆಂಗಳೂರು : ಬೆಂಗಳೂರಿನಲ್ಲಿ ಮಲತಂದೆಯೊಬ್ಬ ತನ್ನ ಇಬ್ಬರು ಹೆಣ್ಣು ಮಕ್ಕಳನ್ನು ಮಚ್ಚಿನಿಂದ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರಿನ ದಾಸರಹಳ್ಳಿಯಲ್ಲಿ ನಡೆದಿದೆ. ಘಟನೆಯಿಂದ ಸಹಜವಾಗಿ ಜನರು ಬೆಚ್ಚಿ ಬಿದ್ದಿದ್ದಾರೆ.
ಹೌದು ಬೆಂಗಳೂರಿನ ದಾಸರಹಳ್ಳಿಯಲ್ಲಿ ಡಬಲ್ ಮರ್ಡರ್ ನಡೆದಿದ್ದು, ಮಲತಂದೆಯಿಂದ ಇಬ್ಬರು ಹೆಣ್ಣು ಮಕ್ಕಳ ಬರ್ಬರ ಹತ್ಯೆಯಾಗಿದೆ. ಮಚ್ಚಿನಿಂದ ಕೊಚ್ಚಿ ಇಬ್ಬರು ಹೆಣ್ಣು ಮಕ್ಕಳನ್ನು ತಂದೆ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಉತ್ತರ ಭಾರತ ಮೂಲದ ವ್ಯಕ್ತಿಯಿಂದ ಹೆಣ್ಣು ಮಕ್ಕಳ ಕೊಲೆಯಾಗಿದೆ ಎಂದು ತಿಳಿದುಬಂದಿದೆ.
ಕಾವೇರಿ ಲೇಔಟ್ ನ ಮನೆಯಲ್ಲಿ ಕುಟುಂಬ ವಾಸವಿತ್ತು. ಸುಮಾರು 14 ವರ್ಷ ಹಾಗೂ 15 ವರ್ಷದ ಹೆಣ್ಣು ಮಕ್ಕಳ ಹತ್ಯೆ ನಡೆದಿದೆ. ಹೆಣ್ಣು ಮಕ್ಕಳನ್ನು ಕೊಂದ ಮಲತಂದೆ ಆರೋಪಿ ಇದೀಗ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಈಶಾನ್ಯ ವಿಭಾಗದ ಡಿಸಿಪಿ ಸುಜಿತ್ ಭೇಟಿ ನೀಡಿದ್ದು, ಅಲ್ಲದೆ ಅಮೃತಹಳ್ಳಿ ಠಾಣೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.ಘಟನೆ ಕುರಿತಂತೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.