ಬೆಂಗಳೂರು: ರಾಜ್ಯ ಸರ್ಕಾರದಿಂದ 2024-25ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಡನೆಯಡಿ ಎಫ್ಎಕ್ಯೂ ಗುಣಮಟ್ಟದ ಹೆಸರುಕಾಳು, ಸೂರ್ಯಕಾಂತಿಯನ್ನು ಖರೀದಿಸಲು ಅನುಮತಿಸಿ ಆದೇಶಿಸಿದೆ.
ಈ ಕುರಿತಂತೆ ಸಹಕಾರ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಅವರು ನಡವಳಿಯನ್ನು ಹೊರಡಿಸಿದ್ದಾರೆ. 2024ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರವು ನಿಗದಿ ಪಡಿಸಿರುವ ಪ್ರತಿ ಕ್ವಿಂಟಾಲ್ ಗೆ ರೂ.8,682ರಂತೆ ಗರಿಷ್ಠ 22,215 ಮೆಟ್ರಿಕ್ ಟನ್ ಎಫ್ಎಕ್ಯೂ ಗುಣಮಟ್ಟದ ಹೆಸರುಕಾಳುಗಳನ್ನು ಬೆಂಬಲ ಬೆಲೆ ಮಾರ್ಗಸೂಚಿಗಳ ಅನ್ವಯ ಖರೀದಿಸಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ.
ಇನ್ನೂ ಗದಗ, ಧಾರವಾಡ, ಹಾವೇರಿ, ಬೆಳಗಾವಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಕಲಬುರ್ಗಿ, ಯಾದಗಿರಿ, ಬೀದರ್, ತುಮಕೂರು, ಹಾಸನ, ಮೈಸೂರು ಮತ್ತು ಚಿತ್ರದುರ್ಗ ಜಿಲ್ಲೆಗಳ ರೈತರಿಂದ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು ಖರೀದಿಸಲು ಅನುಮತಿ ನೀಡಿರುವುದಾಗಿ ಹೇಳಿದ್ದಾರೆ.
ಸೂರ್ಯಕಾಂತಿ ಖರೀದಿಗೆ ಗ್ರೀನ್ ಸಿಗ್ನಲ್
2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರ ನಿಗದಿ ಪಡಿಸಿರುವಂತ ಪ್ರತಿ ಕ್ವಿಂಟಾಲ್ ಗೆ ರೂ.7,280ರಂತೆ ಗರಿಷ್ಠ 13,210 ಮೆಟ್ರಿಕ್ ಟನ್ ಎಫ್ಎಸ್ ಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಖರೀದಿಸಲು ಅನುಮತಿ ನೀಡಲಾಗಿದೆ.
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಮಾರ್ಗಸೂಚಿಗಳ ಅನ್ವಯ ಬಾಗಲಕೋಟೆ, ಬಳ್ಳಾರಿ, ಬೆಳಗಾವಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಗದಗ, ಕಲಬುರ್ಗಿ, ಕೊಪ್ಪಳ, ಮೈಸೂರು, ರಾಯಚೂರು, ವಿಜಯಪುರ, ವಿಜಯನಗರ ಮತ್ತು ಯಾದಗಿರಿ ಜಿಲ್ಲೆಗಳ ರೈತರಿಂದ ಖರೀದಿಸಲು ಅನುಮತಿ ನೀಡಲಾಗಿದೆ.
ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು
ಇದು ‘ಪೊಲೀಸ್ ಇಲಾಖೆ’ಯೇ ತಲೆತಗ್ಗಿಸುವ ಕೆಲಸ: ಓಸಿ ದಂಧೆಕೋರರಿಂದ ‘ಪೋನ್ ಪೇ’ ಮೂಲಕ ಪೊಲೀಸಪ್ಪ ‘ಲಂಚ ಸ್ವೀಕಾರ’