ಬೆಂಗಳೂರು; ಕೇಂದ್ರ ಸರ್ಕಾರದಿಂದ ಶಿರೂರು ಗುಡ್ಡ ಕುಸಿತ ಪ್ರಕರಣ ಸಂಬಂಧ ಈಗಾಗಲೇ ಪರಿಹಾರವನ್ನು ನೀಡಲಾಗಿತ್ತು. ಈಗ ಮುಂದುವರೆದು ಹೆಚ್ಚುವರಿ ಪರಿಹಾರದ ಹಣವನ್ನು ಬಿಡುಗಡೆ ಮಾಡಲಾಗಿದೆ.
ಈ ಕುರಿತಂತೆ ಅಧಿವೇಶನದ ವೇಳೆಯಲ್ಲಿ ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಶಿರೂರು ಗುಡ್ಡ ಕುಸಿತ ದುರಂತವನ್ನು ವಿಶೇಷ ಪ್ರಕರಣವೆಂದು ಪರಿಗಣಿಸುವಂತೆ ಮನವಿ ಮಾಡಿದ್ದರು.
ಕಾಗೇರಿ ಅವರ ಮನವಿಯನ್ನು ಪುರಸ್ಕರಿಸಿರುವಂತ ಪ್ರಧಾನಮಂತ್ರಿ ಕಾರ್ಯಾಲಯವು, ಶಿರೂರು ಗುಡ್ಡ ಕುಸಿತ ದುರಂತದಲ್ಲಿ ಸಾವನ್ನಪ್ಪಿದವರಿಗೆ ಹೆಚ್ಚುವರಿಯಾಗಿ 2 ಲಕ್ಷ ಪರಿಹಾರವನ್ನು ಬಿಡುಗಡೆ ಮಾಡಲಾಗಿದೆ. ಅಲ್ಲದೇ ಗಾಯಾಳುಗಳಿಗೆ ತಲಾ 50 ಸಾವಿರ ಹೆಚ್ಚುವರಿ ಹಣವನ್ನು ಬಿಡುಗಡೆ ಮಾಡಲಾಗಿದೆ.
ಅಂದಹಾಗೇ ಈ ಹಿಂದೆ ಎನ್ ಡಿ ಆರ್ ಎಫ್ ನಿಧಿಯಿಂದ ಕೇಂದ್ರ ಸರ್ಕಾರದಿಂದ ಪರಿಹಾರವಾಗಿ ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರವನ್ನು ನೀಡಲಾಗಿತ್ತು. ಈಗ ಹೆಚ್ಚುವರಿ ಪರಿಹಾರದ ಹಣವನ್ನು ಬಿಡುಗಡೆ ಮಾಡಲಾಗಿದೆ.
ಮಹಿಳೆಯರ ನೆರವಿಗೆ ‘ಸಹಾಯವಾಣಿ’: ತುರ್ತು, ಅಗತ್ಯ ಸಂದರ್ಭದಲ್ಲಿ ಈ ಸಂಖ್ಯೆಗೆ ಕರೆಮಾಡಿ
BIG NEWS: ರಾಜ್ಯ ಸರ್ಕಾರದಿಂದ ‘ಆಸ್ತಿ ನೋಂದಣಿ’ಯಲ್ಲಿ ‘ಆಧಾರ್ ಧೃಡೀಕರಣ’ಕ್ಕೆ ಸಂಬಂಧಿಸಿದಂತೆ ಮಾರ್ಗಸೂಚಿ ಪ್ರಕಟ