ಬೆಂಗಳೂರು: ನಮ್ಮ ಸರ್ಕಾರ ಜಾರಿಗೆ ತಂದಿರುವಂತ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತೊಮ್ಮೆ ಸ್ಪಷ್ಟ ಪಡಿಸಿದ್ದಾರೆ.
ನಮ್ಮ ಸರ್ಕಾರ ಜಾರಿಗೆ ತಂದಿರುವ ಐದು ಜನಪರ ಗ್ಯಾರಂಟಿಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಯಾರೂ ಆತಂಕ ಪಡುವ ಅಗತ್ಯವಿಲ್ಲ. ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ, ಯುವನಿಧಿ ಯೋಜನೆಗಳು ಮಹಿಳೆಯರಿಗೆ ಸಾಮಾಜಿಕ ಮತ್ತು ಆರ್ಥಿಕವಾಗಿ ಬಲ ತುಂಬುವ ಕಾರ್ಯಕ್ರಮಗಳಾಗಿವೆ ಎಂದಿದ್ದಾರೆ.
ರಾಜಕೀಯ ಸ್ವಾತಂತ್ರ್ಯದ ಜೊತೆಗೆ ಸಾಮಾಜಿಕ, ಆರ್ಥಿಕ ಸ್ವಾತಂತ್ರ್ಯ ದೊರೆತಾಗ ಮಾತ್ರ ದೇಶದಲ್ಲಿ ಬಡತನ ತೊಲಗಿಸಲು, ಸಾಮಾಜಿಕ ಸಮಾನತೆ ತರಲು ಸಾಧ್ಯವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ನಮ್ಮ ಸರ್ಕಾರ ಜಾರಿಗೆ ತಂದಿರುವ ಐದು ಜನಪರ ಗ್ಯಾರಂಟಿಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಯಾರೂ ಆತಂಕ ಪಡುವ ಅಗತ್ಯವಿಲ್ಲ. ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ, ಯುವನಿಧಿ ಯೋಜನೆಗಳು ಮಹಿಳೆಯರಿಗೆ ಸಾಮಾಜಿಕ ಮತ್ತು ಆರ್ಥಿಕವಾಗಿ ಬಲ ತುಂಬುವ ಕಾರ್ಯಕ್ರಮಗಳಾಗಿವೆ. ರಾಜಕೀಯ ಸ್ವಾತಂತ್ರ್ಯದ ಜೊತೆಗೆ ಸಾಮಾಜಿಕ, ಆರ್ಥಿಕ… pic.twitter.com/Cpw5n720rG
— DIPR Karnataka (@KarnatakaVarthe) August 26, 2024
BREAKING: ಶಿರೂರು ಗುಡ್ಡ ಕುಸಿತ ದುರಂತ: ಕೇಂದ್ರ ಸರ್ಕಾರದಿಂದ ಹೆಚ್ಚುವರಿ ಪರಿಹಾರದ ಹಣ ಬಿಡುಗಡೆ