ಬೆಂಗಳೂರು: ನಿಮ್ಮ ಮನೆಗೆ ತಂದ ಅನ್ನಭಾಗ್ಯದ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿಯಂತಹ ಕಾಳುಗಳು ಇವೆಯೇ? ಅದೇನು ಎಂದು ತಿಳಿಯಬೇಕೇ? ಈ ಬಗ್ಗೆ ನಿಮಗೂ ಆಂತಕವಿದೆಯೇ? ಭಯಪಡದಿರಿ, ಅದು ಪ್ಲಾಸ್ಟಿಕ್ ಅಕ್ಕಿಯಲ್ಲ, ಸಾರವರ್ಧಿತ ಅಕ್ಕಿ. ಆ ಬಗ್ಗೆ ಮುಂದೆ ಓದಿ.
ಈ ಕುರಿತಂತೆ ರಾಜ್ಯ ಸರ್ಕಾರದಿಂದ ಮಾಹಿತಿ ನೀಡಲಾಗಿದ್ದು, ಅನ್ನಭಾಗ್ಯದ ಪಡಿತರ ಅಕ್ಕಿಯಲ್ಲಿ ಸ್ವಲ್ಪ ಪ್ರಮಾಣದ ಅಕ್ಕಿ ನೀರಲ್ಲಿ ಮುಳುಗದೆ ತೇಲುತ್ತಿರುವುದನ್ನು ಕಂಡು, ಅದು ಪ್ಲಾಸ್ಟಿಕ್ ಅಕ್ಕಿ ಎಂದು ಜನ ಗೊಂದಲಕ್ಕೆ ಈಡಾಗುತ್ತಿರುವುದು ವರದಿಯಾಗುತ್ತಿದೆ. ಆದರೇ ಇದು ಆತಂಕ ಪಡುವ ಸಂಗತಿಯಲ್ಲ ಎಂದು ತಿಳಿಸಿದೆ.
ಕೇಂದ್ರ ಸರ್ಕಾರದ ಸಚಿವಾಲಯದ ಮಾರ್ಗಸೂಚಿಯಂತೆ ಪ್ರತಿ 1 ಕೆಜಿ ಅಕ್ಕಿಗೆ 10 ಗ್ರಾಂ ನಷ್ಟು ಸಾರವರ್ಧಿತ ಅಕ್ಕಿಯನ್ನು ಬೆರಸಲಾಗುತ್ತದೆ. ಇದು ವ್ಯಕ್ತಿಯ ಆರೋಗ್ಯಕ್ಕೆ ಅಗತ್ಯವಾದ ಜೀವಸತ್ವಗಳು, ಸೂಕ್ಷ್ಮ ಪೋಷಕಾಂಶಗಳಾದ ಕಬ್ಬಿಣಾಂಶ, ಪೋಲಿಕ್ ಆಮ್ಲ ಮತ್ತು ವಿಟಮಿನ್ ಬಿಯನ್ನು ಒದಗಿಸುತ್ತದೆ ಎಂದು ಮಾಹಿತಿ ಹಂಚಿಕೊಂಡಿದೆ.
ಈ ಸಾರವರ್ಧಿತ ಅಕ್ಕಿಯು ನಿಮ್ಮ ಆರೋಗ್ಯವನ್ನು ಉತ್ತಮಗೊಳಿಸುತ್ತದೆ. ರಕ್ತ ಹೀನತೆ, ಅಪೌಷ್ಟಿಕತೆಯನ್ನು ಹೋಗಲಾಡಿಸುತ್ತದೆ ಎಂದು ಹೇಳಿದೆ.
ಪ್ರಯೋಗಾಲಯದಿಂದ ಪರೀಕ್ಷೆಗೆ ಒಳಪಟ್ಟ ಸಾರವರ್ಧಿತ ಅಕ್ಕಿಯನ್ನು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದಿಂದ ಬಳಕೆಗೆ ಯೋಗ್ಯವಾದ ಪೌಷ್ಠಿಕಾಂಶಭರಿತವಾದ ಅಕ್ಕಿ ಎಂದು ಪರಿಗಣಿಸಲಾಗಿರುತ್ತದೆ ಎಂಬುದಾಗಿ ಸ್ಪಷ್ಟ ಪಡಿಸಿದೆ.
ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು
Job Alert : ಭಾರತೀಯ ರೈಲ್ವೆ ಇಲಾಖೆಯಲ್ಲಿ 14,298 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | RRB Recruitment 2024