ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಗೆ ಪ್ರತಿದಿನ ಶಿವಾಜಿ ಹೋಟೆಲ್ ನಿಂದ ಬಿರಿಯಾನಿ ಪೂರೈಕೆ ಆಗುತ್ತಿದೆ ಎನ್ನಲಾಗಿದೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡಿರುವ ಬೆನ್ನಲ್ಲೆ ಇದೀಗ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ನಟ ದರ್ಶನ್ ಗೆ ಟೀ, ಸಿಗರೇಟ್ ಮುಂತಾದವುಗಳ ಜೊತೆಗೆ ಹೋಟೆಲ್ ನಿಂದ ಬಿರಿಯಾನಿ ಸಹ ಪೂರೈಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.
ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿ ಜೈಲು ಸೇರಿದ್ದ ನಟ ದರ್ಶನ್, ಜೈಲಿನೊಳಗೆ ಸಿಗರೇಟು ಸೇದುತ್ತಿರುವ ಫೋಟೋ ಹಾಗೂ ವಿಡಿಯೋ ಕಾಲಿಂಗ್ ಮಾಡಿರುವ ವಿಚಾರ ಬೆಳಕಿಗೆ ಬಂದ ಬೆನ್ನಲ್ಲೇ ನಟ ದರ್ಶನ್ ಗೆ ಪ್ರತಿದಿನ ಬಿರಿಯಾನಿ ಪೂರೈಕೆಯಾಗುತ್ತಿದೆ ಎನ್ನುವ ಆರೋಪ ಕೇಳಿ ಬಂದಿದ್ದು, ಇದೀಗ ನಟ ದರ್ಶನ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.