ಪುಣೆ : ದೇಶದಲ್ಲಿ ಕಾಮುಕರ ಅಟ್ಟಹಾಸ ಮುಂದುವರೆದಿದ್ದು, ಪುಣೆಯ ಹೊರವಲಯದ ಗ್ರಾಮಾಂತರ ಪ್ರದೇಶದಲ್ಲಿ 10 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 67 ವರ್ಷದ ವೃದ್ಧನನ್ನು ಬಂಧಿಸಲಾಗಿದೆ ಎಂದು ಪುಣೆ ಗ್ರಾಮಾಂತರ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಶನಿವಾರದಂದು ತನ್ನ ಶಾಲೆಯಲ್ಲಿ ನಡೆದ “ಗುಡ್ ಟಚ್, ಬ್ಯಾಡ್ ಟಚ್” ಅಧಿವೇಶನದಲ್ಲಿ ಬಾಲಕಿ ತನ್ನ ಸಂಕಷ್ಟದ ಬಗ್ಗೆ ತೆರೆದಿಟ್ಟ ನಂತರ ಘಟನೆ ಬೆಳಕಿಗೆ ಬಂದಿದೆ. ಅಧಿಕಾರಿಗಳು ಆಕೆಯ ಪೋಷಕರಿಗೆ ಮಾಹಿತಿ ನೀಡಿದ್ದು, ಅವರು ಪೊಲೀಸ್ ದೂರು ದಾಖಲಿಸಿದ್ದಾರೆ, ಇದು ವ್ಯಕ್ತಿಯನ್ನು ಬಂಧಿಸಲು ಕಾರಣವಾಯಿತು.
ಅಧಿಕಾರಿಯ ಪ್ರಕಾರ, ಆರೋಪಿ ಕೆಲವು ದಿನಗಳ ಹಿಂದೆ ಶಾಲೆಗೆ ಹೋಗುತ್ತಿದ್ದ ಬಾಲಕಿಯನ್ನು ತಡೆದು ನಿಲ್ಲಿಸಿ ಚಾಕೊಲೇಟ್ ನೀಡಿ ಹತ್ತಿರವಾಗಲು ಯತ್ನಿಸಿದ್ದರು. ಶುಕ್ರವಾರ ಶಾಲೆಯಿಂದ ಮನೆಗೆ ಬರುತ್ತಿದ್ದ ಆಕೆಯನ್ನು ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಆರೋಪಿಯ ವಿರುದ್ಧ BNS ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (POCSO) ಕಾಯ್ದೆಯ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.