ಬೆಂಗಳೂರು: ಅಪಘಾತಕ್ಕೆ ಒಳಗಾಗುವವರಿಗೆ ತುರ್ತು ಆರೋಗ್ಯ ಸೇವೆಗಾಗಿ ಪ್ರತ್ಯೇಕ ಅಂಬ್ಯುಲೆನ್ಸ್ ಸೇವೆ ಶೀಘ್ರದಲ್ಲಿಯೇ ಪ್ರಾರಂಭಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. 65 ನೂತನ ಪ್ರತ್ಯೇಕ ಅಂಬ್ಯುಲೆನ್ಸ್ ಸೇವೆಯನ್ನ ಅಪಘಾತಕ್ಕಿಡಾದವರ ನೆರವಿಗಾಗಿಯೇ ಒದಗಿಸಲಾಗುತ್ತಿದೆ. ಇದು ರಾಜ್ಯ ಸರ್ಕಾರದ ನೂತನ ಯೋಜನೆಯಾಗಿದ್ದು, ಶೀಘ್ರದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಅಂಬ್ಯುಲೆನ್ಸ್ ಗಳಿಗೆ ಚಾಲನೆ ನೀಡಲಿದ್ದಾರೆ ಎಂಬುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆಯ ಆವರಣದಲ್ಲಿ ಸುಮಾರು 150 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೂಮಿಪೂಜೆ ನೆರವೇರಿಸಿದರು.
ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಆರೋಗ್ಯ ಸೇವೆಗಳನ್ನ ನೀಡುವಲ್ಲಿ ಖಾಸಗಿ ಆಸ್ಪತ್ರೆಗಳಿಗಿಂತ ಸರ್ಕಾರಿ ಆಸ್ಪತ್ರೆಗಳು ಹಿಂದೆಬೀಳಬಾರದು. ಸರ್ಕಾರಿ ಆಸ್ಪತ್ರೆಗಳಲ್ಲಿಯೂ ಉತ್ತಮ ವೈದ್ಯರುಗಳಿದ್ದಾರೆ. ಖಾಸಗಿ ಆಸ್ಪತ್ರೆಗಳಲ್ಲಿರುವ ವೈದ್ಯರಿಗೆ ಹೊಲಿಸಿದರೆ ಹೆಚ್ಚು ಅನುಭವ ಸರ್ಕಾರಿ ಆಸ್ಪತ್ರೆಗಳ ವೈದ್ಯರು ಹೊಂದಿದ್ದಾರೆ ಎಂದು ಅಭಿಪ್ರಾಯಪಟ್ಟರು. ಹೈಟೆಕ್ ಆರೋಗ್ಯ ಸೇವೆಗಳು ಸರ್ಕಾರಿ ಆಸ್ಪತ್ರೆಗಳಲ್ಲಿ ದೊರೆಯುವಂತಾಗಬೇಕು. ಆಧುನಿಕ ಯುಗದಲ್ಲಿ ರೋಬೆಟಿಕ್ ಸರ್ಜರಿಗಳನ್ನ ನಡೆಸಲಾಗುತ್ತಿದೆ. ರೋಬೆಟಿಕ್ ಸರ್ಜರಿಯಂತಹ ಆರೋಗ್ಯ ಸೇವೆಗಳು ಸರ್ಕಾರಿ ಆಸ್ಪತ್ರೆಯಲ್ಲೂ ದೊರಕಿಸಿಕೊಡುವ ನಿಟ್ಟಿನಲ್ಲಿ ಸರ್ಕಾರ ಕಾರ್ಯಕ್ರಮಗಳನ್ನ ಹಮ್ಮಿಕೊಳ್ಳಲಿದೆ ಎಂದು ಇದೇ ವೇಳೆ ಸಿಎಂ ಸಿದ್ದರಾಮಯ್ಯ ಹೇಳಿದರು.
ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್ : ಈ ಯೋಜನೆಯಡಿ ಪ್ರತಿ ವರ್ಷ ಸಿಗಲಿದೆ 72,000 ರೂ. ಪಿಂಚಣಿ!