ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು
ಬೆಂಗಳೂರು: ರಾಜ್ಯ ಸರ್ಕಾರದಿಂದ ಡಿಜಿಟಲ್ ಮಾಧ್ಯಮಗಳಿಗೆ ಸಿಹಿಸುದ್ದಿ ಎನ್ನುವಂತೆ ಕರ್ನಾಟಕ ಡಿಜಿಟಲ್ ಜಾಹೀರಾತು ಮಾರ್ಗಸೂಚಿ-2024 ಅನ್ನು ಪ್ರಕಟಿಸಿದೆ. ಹೀಗಾಗಿ ಆ ಮಾರ್ಗಸೂಚಿಯಂತೆ ಡಿಜಿಟಲ್ ಮೀಡಿಯಾಗಳಿಗೆ ವಾರ್ತಾ ಇಲಾಖೆಯಿಂದ ಸರ್ಕಾರಿ ಜಾಹೀರಾತುಗಳನ್ನು ನೀಡಲು ಕ್ರಮವಹಿಸಲಿದೆ.
ಈ ಕುರಿತಂತೆ ಕನ್ನಡ, ಸಂಸ್ಕೃತಿ ಮತ್ತು ವರ್ತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಮಾಧ್ಯಮಗಳು ಹೆಚ್ಚು ಪ್ರಚಲಿತವಾಗಿದ್ದು, ಡಿಜಿಟಲ್ ಮಾಧ್ಯಮಗಳಲ್ಲಿ ಸರ್ಕಾರದ ಜಾಹೀರಾತು ಪ್ರಕಟಿತವಾದಲ್ಲಿ ಸರ್ಕಾರದ ಜಾಹೀರಾತುಗಳು ಯುವ ಸಮೂಹವನ್ನು ತಲುಪಲು ಸಹಕಾರಿಯಾಗುವುದರಿಂದ ಹಾಗೂ ಡಿಜಿಟಲ್ ಮಾಧ್ಯಮಗಳು ಇತ್ತೀಚೆಗೆ ಸರ್ಕಾರದ ಜಾಹೀರಾತು ಕೋರಿ ಇಲಾಖೆಗೆ ಮನವಿಗಳನ್ನು ಸಲ್ಲಿಸುತ್ತಿದ್ದು, ಡಿಜಿಟಲ್ ಮಾಧ್ಯಮಗಳಿಗೆ ಇಲಾಖೆಯಿಂದ ಜಾಹೀರಾತು ದರ ನಿಗದಿಯಾಗಿಲ್ಲದ ಕಾರಣ ಸರ್ಕಾರದ ಜಾಹೀರಾತುಗಳನ್ನು ಬಿಡುಗಡೆ ಮಾಡಲು ಸಾಧ್ಯವಾಗುತ್ತಿಲ್ಲವಾದ್ದರಿಂದ, ಪ್ರಸ್ತುತ ಕೇಂದ್ರ ಸರ್ಕಾರದ ಡಿ.ಎ.ವಿ.ಪಿ. ಸಿದ್ಧಪಡಿಸಿರುವ ನೀತಿಯನ್ನು ಪರಿಗಣನೆಗೆ ತೆಗೆದುಕೊಂಡು ಅದೇ ಮಾದರಿಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಡಿಜಿಟಲ್ ಪಾಲಿಸಿಯನ್ನು ಸಿದ್ಧಪಡಿಸಿ ಸಲ್ಲಿಸುತ್ತಾ, ಸದರಿ ನಿಯಮಗಳಿಗೆ ಸರ್ಕಾರದ ಅನುಮೋದನೆ ನೀಡಿ ಆದೇಶ ಹೊರಡಿಸುವಂತೆ ಕೋರಲಾಗಿತ್ತು.
ಇತ್ತೀಚಿನ ಕೆಲವು ವರ್ಷಗಳಿಂದ ಮಾಧ್ಯಮದ ವ್ಯಾಪ್ತಿ ಬದಲಾಗಿದ್ದು, ಅಂತರ್ಜಾಲ, ಖಾಸಗಿ ಕಂಪ್ಯೂಟರ್, ಸ್ಮಾರ್ಟ್ ಟಿವಿ ಹಾಗೂ ಸ್ಮಾರ್ಟ್ ಫೋನ್‌ಗಳ ಮುಖಾಂತರ ಸಾಮಾಜಿಕ ಜಾಲತಾಣಗಳ ಬಳಕೆ ಹೆಚ್ಚಾಗಿರುವುದರಿಂದ ಸಾಂಪ್ರದಾಯಿಕ ಜಾಹೀರಾತುಗಳಿಗಿಂತ ಡಿಜಿಟಲ್ ಜಾಹೀರಾತು ಹೆಚ್ಚು ಪ್ರಭಾವಶಾಲಿಯಾಗಿದೆ. ಸಾಂಪ್ರದಾಯಿಕ ಜಾಹೀರಾತುಗಳಿಗೆ ಹೋಲಿಸಿದರೆ ಡಿಜಿಟಲ್ ಜಾಹೀರಾತುಗಳು ಹೆಚ್ಚು ವ್ಯಾಪ್ತಿ ಮತ್ತು ನಿರ್ಧಿಷ್ಟ ಜನರನ್ನು ತಲುಪುವುದರಿಂದ ಸರ್ಕಾರಗಳು ಮತ್ತು ಕಾರ್ಪೊರೇಟ್ ಸಂಸ್ಥೆಗಳ ಜಾಹೀರಾತುಗಳಲ್ಲಿ ಈಗ ಡಿಜಿಟಲ್ ಜಾಹೀರಾತುಗಳೇ ಸಿಂಹಪಾಲು ಪಡೆಯುತ್ತಿವೆ.
ಈ ಹಿನ್ನೆಲೆಯಲ್ಲಿ, ಸರ್ಕಾರದ ನೀತಿ ಮತ್ತು ಯೋಜನೆಗಳನ್ನು ಅಂತರ್ಜಾಲ ಬಳಸುವ ಜನರಿಗೆ ತಲುಪಿಸಲು ಡಿಜಿಟಲ್ ಜಾಹೀರಾತು ವ್ಯವಸ್ಥೆಯನ್ನು ಬಳಸಿಕೊಳ್ಳಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ತೀರ್ಮಾನಿಸಿ ನವೀನ ವಿದ್ಯುನ್ಮಾನ ಮಾಧ್ಯಮ ಹಾಗೂ ಸೈಬರ್ ಮಾಧ್ಯಮವನ್ನು ಸರ್ಕಾರದ ಜಾಹೀರಾತಿಗಾಗಿ ಬಳಸಿಕೊಳ್ಳಲು ಅನುಕೂಲವಾಗುವಂತೆ ಕರ್ನಾಟಕ ಡಿಜಿಟಲ್ ಜಾಹೀರಾತು ಮಾರ್ಗಸೂಚಿಗಳನ್ನು ಸಿದ್ಧಪಡಿಸಿ ಸಲ್ಲಿಸುತ್ತಾ ಅದರನ್ವಯ ಆದೇಶ ಹೊರಡಿಸುವಂತೆ ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು ಇವರು ಕೋರಿರುತ್ತಾರೆ.
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಸರ್ಕಾರದ ನೀತಿ ಮತ್ತು ಯೋಜನೆಗಳನ್ನು ಅಂತರ್ಜಾಲ ಬಳಸುವ ಜನರಿಗೆ ತಲುಪಿಸುವುದಕ್ಕಾಗಿ ಡಿಜಿಟಲ್ ಜಾಹೀರಾತು ವ್ಯವಸ್ಥೆಯನ್ನು ಬಳಸಿಕೊಳ್ಳಲು ಈ ಆದೇಶದೊಂದಿಗೆ ಲಗತ್ತಿಸಿರುವ ಅನುಬಂಧದಲ್ಲಿರುವಂತೆ, ಕರ್ನಾಟಕ ಡಿಜಿಟಲ್ ಜಾಹೀರಾತು ಮಾರ್ಗಸೂಚಿ-2024ನ್ನು ತಕ್ಷಣದಿಂದ ಜಾರಿಗೆ ತರಲು ಸರ್ಕಾರದ ಮಂಜೂರಾತಿ ನೀಡಲಾಗಿದೆ ಎಂದಿದ್ದಾರೆ.
ಹೀಗಿದೆ ಕರ್ನಾಟಕ ಡಿಜಿಟಲ್ ಜಾಹೀರಾತು ಮಾರ್ಗಸೂಚಿ-2024 ನೀತಿಗಳು
BIG NEWS: ಅಪಘಾತ ಸಂಭವಿಸುವ ‘ಹಾಟ್ ಸ್ಪಾಟ್’ಗಳಲ್ಲಿ ಪ್ರತ್ಯೇಕ ‘ಅಂಬ್ಯುಲೆನ್ಸ್’ ವ್ಯವಸ್ಥೆ: ಸಚಿವ ದಿನೇಶ್ ಗುಂಡೂರಾವ್
ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್ : ಈ ಯೋಜನೆಯಡಿ ಪ್ರತಿ ವರ್ಷ ಸಿಗಲಿದೆ 72,000 ರೂ. ಪಿಂಚಣಿ!