ಬೆಂಗಳೂರು : ಶಿಕ್ಷಕರ ದಿನದಂದು ನೀಡಲಾಗುವ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ ಪ್ರಕಟವಾಗಿದ್ದು, ಈ ಬಾರಿ ಕರ್ನಾಟಕದ ನಾಲ್ವರು ಶಿಕ್ಷಕರು ಸೆರಿದಂತೆ ವಿವಿಧ ರಾಜ್ಯಗಳ 50 ಶಿಕ್ಷಕರು ಆಯ್ಕೆಯಾಗಿದ್ದಾರೆ.
ಈ ಕುರಿತಂತೆ ಕೇಂದ್ರ ಶಿಕ್ಷಣ ಸಚಿವಾಲಯದ ಜಂಟಿ ಕಾರ್ಯದರ್ಶಿ 2024ನೇ ಸಾಲಿನ ರಾಷ್ಟ್ರೀಯ ಉತ್ತಮ ಶಿಕ್ಷಕರ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. 2024ರಲ್ಲಿ 50 ಶಿಕ್ಷಕರಿಗೆ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಕರ್ನಾಟಕದ ಪೈಕಿ ಮೈಸೂರು ಜಿಲ್ಲೆಯ ಹುಣಸೂರು ಸರ್ಕಾರಿ ಪಿಯು ಕಾಲೇಜಿನ ಎಚ್.ಎನ್. ಗಿರೀಶ್, ಬೆಂಗಳೂರಿನ ಡಾಪೋಡಿಲ್ಸ್ ಶಾಲೆಯ ಶಿಕ್ಷಕರು ಎಚ್.ಕೆ. ನರಸಿಂಹ ಮೂರ್ತಿ, ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಸರ್ಕಾರಿ ಶಾಲೆಯ ಶಿಕ್ಷಕರಾದ ಆರ್. ನಾರಾಯಣಸ್ವಾಮಿ ಮತ್ತು ಬೆಂಗಳೂರು ಜಾಲಹಳ್ಳಿಯ ಕೇಂದ್ರೀಯ ವಿದ್ಯಾಲಯದ ಅಶೋಕ್ ಸೇನ್ ಗುಪ್ತಾ ಅವರು ಪ್ರಶಸ್ತಿಗೆ ಆಯ್ಕೆಯಾಗಿದ್ದು, ಸೆ.5 ರಂದು ದೆಹಲಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪುರಸ್ಕಾರವನ್ನು ಸ್ವೀಕರಿಸಲಿದ್ದಾರೆ.