ನವದೆಹಲಿ: 1992 ರ ಬ್ಯಾಚ್ ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬಿ ಶ್ರೀನಿವಾಸನ್ ಅವರನ್ನು ರಾಷ್ಟ್ರೀಯ ಭದ್ರತಾ ಪಡೆ (ಎನ್ಎಸ್ಜಿ) ಹೊಸ ಮಹಾನಿರ್ದೇಶಕರಾಗಿ ಕೇಂದ್ರ ಸರ್ಕಾರ ಮಂಗಳವಾರ ನೇಮಿಸಿದೆ.
1992ರ ಬ್ಯಾಚ್ ನ ಬಿಹಾರ ಕೇಡರ್ ನ ಐಪಿಎಸ್ ಅಧಿಕಾರಿಯಾಗಿರುವ ಶ್ರೀನಿವಾಸನ್ ಅವರು ನಳಿನ್ ಪ್ರಭಾತ್ ಅವರ ನಿರ್ಗಮನದ ನಂತರ ಎನ್ ಎಸ್ ಜಿ ಮಹಾನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ಶ್ರೀನಿವಾಸನ್ ಅವರನ್ನು ಎನ್ಎಸ್ಜಿ ಮಹಾನಿರ್ದೇಶಕರಾಗಿ ನೇಮಕ ಮಾಡಲು ಸಂಪುಟದ ನೇಮಕಾತಿ ಸಮಿತಿ ಅನುಮೋದನೆ ನೀಡಿದೆ ಎಂದು ಸಿಬ್ಬಂದಿ ಸಚಿವಾಲಯದ ಆದೇಶದಲ್ಲಿ ತಿಳಿಸಲಾಗಿದೆ.