ಬೆಂಗಳೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ಪಿಯುಸಿ, ಡಿಪ್ಲೋಮಾ, ಐಟಿಐ, ಪದವಿ ಮತ್ತು ಸ್ನಾತಕೋತ್ತರ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಭೌದ್ದ ಮತ್ತು ಪಾರ್ಸಿ) ಶುಲ್ಕ ಮರುಪಾವತಿ ಯೋಜನೆಯಡಿ ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ನಲ್ಲಿ ಮೆಟ್ರಿಕ್ ನಂತರ ಮತ್ತು ಮೆರಿಟ್ ಕಂ ಮೀನ್ಸ್ ವಿದ್ಯಾರ್ಥಿವೇತನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಆನ್ಲೈನ್ ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ (ಎಸ್ಎಸ್ಪಿ ಪೋರ್ಟಲ್) https://ssp.karnatka.go.in/ ಜಾಲತಾಣಕ್ಕೆ ಭೇಟಿ ನೀಡಬೇಕು.ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿದೆ.
ಅರ್ಹತೆ: ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಭೌದ್ದ ಮತ್ತು ಪಾರ್ಸಿ ಜನಾಂಗಕ್ಕೆ ಸೇರಿದವರಾಗಿರಬೇಕು. ಮೆಟ್ರಿಕ್ ನಂತರದ ಕೋರ್ಸುಗಳ ಶುಲ್ಕ ಮರುಪಾವತಿ ಯೋಜನೆಗಾಗಿ ಕುಟುಂಬದ ವಾರ್ಷಿಕ ಆದಾಯವು ರೂ.2 ಲಕ್ಷ ಮೀರಿರಬಾರದು ಮತ್ತು ಮೆರಿಟ್-ಕಮ್-ಮೀನ್ಸ್ ಶುಲ್ಕ ಮರುಪಾವತಿ ಯೋಜನೆಗಾಗಿ ಕುಟುಂಬದ ವಾರ್ಷಿಕ ಆದಾಯವು ರೂ.2.5 ಲಕ್ಷ ಮೀರಿರಬಾರದು.
ಶುಲ್ಕ ಮರುಪಾವತಿ ಯೋಜನೆಯ ಪ್ರಯೋಜನೆ ಪಡೆಯಲು ವಿದ್ಯಾರ್ಥಿಗಳು ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಮತ್ತು ಎನ್ಪಿಸಿಐ ಮ್ಯಾಪಿಂಗ್ ಆಕ್ಟಿವ್ ಇರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ಈ ಹಿಂದೆ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಹೊಸದಾಗಿ ಅರ್ಜಿ ಸಲ್ಲಿಸಬೇಕು. ಶುಲ್ಕ ಮರುಪಾವತಿ ಯೋಜನೆಯ ಪ್ರಕಿಯೆಯು ಸರ್ಕಾರದಿಂದ ಕಾಲಕಾಲಕ್ಕೆ ಹೊರಡಿಸಲಾಗುವ ಸರ್ಕಾರ ಆದೇಶಗಳು ಹಾಗೂ ಮಾರ್ಗಸೂಚನೆಗಳಿಗೆ ಒಳಪಟ್ಟಿರುತ್ತದೆ.