ದಾವಣಗೆರೆ: ಪ್ರಸಕ್ತ ಸಾಲಿನಲ್ಲಿ ಹೊಲಿಗೆ ತರಬೇತಿ ಪಡೆದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಸಮುದಾಯಕ್ಕೆ ಸೇರಿದ ಮಹಿಳಾ ಫಲಾನುಭವಿಗಳಿಗೆ ಹೊಲಿಗೆ ಯಂತ್ರ ಖರೀದಿಸಿ ವಿತರಿಸುವ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಮಹಾನಗರಪಾಲಿಕೆಯ ವೆಬ್‍ಸೈಟ್ www.davanagerecity.gov.in ಮೂಲಕ ಅಥವಾ ಕಚೇರಿಗೆ ಖುದ್ದು ಭೇಟಿ ನೀಡಿ ಎಲ್ಲಾ ದಾಖಲೆಗಳೊಂದಿಗೆ ಸೆ.26 ರೊಳಗಾಗಿ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಕಲ್ಯಾಣ ಶಾಖೆ, ಮಹಾನಗರಪಾಲಿಕೆ, ದಾವಣಗೆರೆ (ಹಳೇ ಕಂದಾಯ ಶಾಖೆ ಕಟ್ಟಡ) ಇಲ್ಲಿ ಸಂಪರ್ಕಿಸಲು ಪಾಲಿಕೆ ಆಯುಕ್ತರಾದ ರೇಣುಕಾ ತಿಳಿಸಿದ್ದಾರೆ.
BREAKING: ಸೆ.5ರಂದು ಮಹತ್ವದ ‘ರಾಜ್ಯ ಸಚಿವ ಸಂಪುಟ ಸಭೆ’ ನಿಗದಿ | Karnataka Cabinet Meeting
ಬಿಜೆಪಿ ಕೇಂದ್ರ ಸರ್ಕಾರದ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಪರಿವರ್ತನೆ ಪರ್ವ ಆರಂಭ…!