ಬೆಂಗಳೂರು : ಗ್ಯಾರಂಟಿ ಯೋಜನೆಗಳ ಕುರಿತು ಸಹಾಯಕ್ಕಾಗಿ ಬಿಬಿಎಂಪಿ ಸಹಾಯವಾಣಿ ಆರಂಭಿಸಿದ್ದು, ಗೃಹಲಕ್ಷ್ಮಿ, ಅನ್ನಭಾಗ್ಯ ಸೇರಿ ಗ್ಯಾರಂಟಿ ಯೋಜನೆಗಳ ಕುರಿತು ಸಮಸ್ಯೆಗಳಿದ್ದರೆ ಈ ಕೆಳಗಿನ ಸಂಖ್ಯೆಗೆ ಕರೆ ಮಾಡಬಹುದು.
ಬಿಬಿಎಂಪಿ ವ್ಯಾಪ್ತಿಯಲ್ಲಿ ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದಂತೆ ದೂರು ಸಲ್ಲಿಸಲು ಸಹಾಯವಾಣಿ ಆರಂಭಿಸಲಾಗಿದ್ದು, ಸಮಸ್ಯೆಗಳಿದ್ದರೆ 9480683972 ಸಂಖ್ಯೆಗೆ ಕರೆ ಮಾಡುವಂತೆ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕೃಷ್ಣಪ್ಪ ತಿಳಿಸಿದ್ದಾರೆ.
ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರದಲ್ಲಿನ ಜನರಿಗೆ ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ, ಯುವನಿಧಿ ಹಾಗೂ ಅನ್ನಭಾಗ್ಯ ಯೋಜನೆಗಳಿಗೆ ಸಂಬಂಧಿಸಿದಂತೆ ದೂರು ಸಲ್ಲಿಕೆಗೆ ಸಹಾಯವಾಣಿ ಸಂಖ್ಯೆ ಆರಂಭಿಸಲಾಗಿದ್ದು, 9480683972 ಸಂಖ್ಯೆಗೆ ಕರೆ ಮಾಡಿ ಸಮಸ್ಯೆ ದಾಖಲಿಸಬಹುದಾಗಿದೆ. ಸಂಬಂಧ ಪಟ್ಟ ಅಧಿಕಾರಿಗೆ ಈ ಬಗ್ಗೆ ಮಾಹಿತಿ ನೀಡಿ ಪರಿಹಾರ ಮಾಡುವ ಕೆಲಸವನ್ನು ಮಾಡಲಾಗುತ್ತದೆ.