ಬೆಂಗಳೂರು: ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಸಿಬಿಐಗೆ ನೀಡಿದ್ದಂತ ಅನುಮತಿಯನ್ನು ಹಿಂಪಡೆದಿದ್ದು ಪ್ರಶ್ನಿಸಿ, ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿತ್ತು. ಇಂತಹ ಸಿಬಿಐ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಉಪ ಮುಖ್ಯಮಂತ್ರಿ ಡಿ.ಕೆ ಶಿವುಕಮಾರ್ ಗೆ ಬಿಗ್ ರಿಲೀಫ್ ನೀಡಿದೆ.
ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ಸಂಬಂಧ ಹಿಂದಿನ ಸರ್ಕಾರವು ಸಿಬಿಐ ತನಿಖೆಗೆ ವಹಿಸಿ ಅನುಮತಿ ನೀಡಲಾಗಿತ್ತು. ಆದರೇ ಹಾಲಿ ಕಾಂಗ್ರೆಸ್ ಸರ್ಕಾರವು ಇದನ್ನು ಹಿಂಪಡೆಯಲಾಗಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಸಿಬಿಐ ರಿಟ್ ಅರ್ಜಿ ಸಲ್ಲಿಸಿತ್ತು.
ಇಂತಹ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು ಇಂದು ರಾಜ್ಯ ಸರ್ಕಾರ ಹಾಗೂ ಸಿಬಿಐ ನಡುವಿನ ವಿಚಾರವಾಗಿದೆ. ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ಸೂಕ್ತವೆಂದು ತಿಳಿಸುವ ಮೂಲಕ ಅರ್ಜಿಯನ್ನು ವಜಾಗೊಳಿಸಿದೆ. ಈ ಮೂಲಕ ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಬಿಗ್ ರಿಲೀಫ್ ನೀಡಿದೆ.
`TRAI’ ನಿಂದ ಹೊಸ ನಿಯಮ ಜಾರಿ : ಈ ತಪ್ಪು ಮಾಡಿದ್ರೆ ಬಂದ್ ಆಗಲಿದೆ ನಿಮ್ಮ `SIM ಕಾರ್ಡ್’ | TRAI New Rules