ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಿನ್ನೆಯಷ್ಟೇ ಬಳ್ಳಾರಿ ಸೆಂಟ್ರಲ್ ಜೈಲು ಸೇರಿರುವ ಬೆನ್ನಲ್ಲೇ ಇಂದು ಬೆಂಗಳೂರಿನಲ್ಲಿ ನಟ ದರ್ಶನ್ ನಟನೆಯ ಕರಿಯಾ ಸಿನಿಮಾ ರೀ ರಿಲೀಸ್ ಆಗಿದ್ದು, ಚಿತ್ರಮಂದಿರದ ಬಳಿ ಪುಂಡಾಟ ನಡೆಸಿದ ದರ್ಶನ್ ಅಭಿಮಾನಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಪ್ರಸನ್ನ ಥಿಯೇಟರ್ ನಲ್ಲಿ ದರ್ಶನ್ ಅಭಿಮಾನಿಗಳು ಪುಂಡಾಟ ನಡೆಸಿದ್ದು, ಅವಾಚ್ಯ ಶಬ್ದಗಳಿಂದ ಮಾತನಾಡಿದ ಹಿನ್ನೆಲೆಯಲ್ಲಿ ಓರ್ವ ಅಭಿಮಾನಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಬೆಂಗಳೂರು ಸೇರಿದಂತೆ ರಾಜ್ಯದ ಹಲವಡೆ ಇಂದು ಕರಿಯಾ ಸಿನಿಮಾ ಮರು ಬಿಡುಗಡೆಗೊಂಡಿದ್ದು, ಬೆಂಗಳೂರಿನ ಪ್ರಸನ್ನ ಚಿತ್ರಮಂದಿರಕ್ಕೆ ಸಿನಿಮಾ ನೋಡಲು ಬಂದ ದರ್ಶನ್ ಅಭಿಮಾನಿಗಳು ಪುಂಡಾಟ ನಡೆಸಿದ್ದಾರೆ. ಈ ವೇಳೆ ಪೊಲೀಸರು ಓರ್ವ ಅಭಿಮಾನಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.








