ಬೆಂಗಳೂರು : ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಗೆ ಮತ್ತೊಂದು ಬಲಿಯಾಗಿದ್ದು, ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.
ಬೆಂಗಳೂರಿನ ಕೆ.ಆರ್.ಪುರಂನ ಐಟಿಐ ಗೇಟ್ ಬಳಿ ಬಿಎಂಟಿಸಿ ಬಸ್-ಬೈಕ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಘಟನೆ ನಡೆದ ಸ್ಥಳಕ್ಕೆ ಕೆ.ಆರ್.ಪುರಂ ಸಂಚಾರಿ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಕೆ.ಆರ್.ಪುರಂ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.