ಬೆಂಗಳೂರು: ರಾಜ್ಯಪಾಲರು ಕೇಂದ್ರ ಸಚಿವ ಕುಮಾರಸ್ವಾಮಿ, ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಜನಾರ್ದನ ರೆಡ್ಡಿ ಹಾಗೂ ಶಶಿಕಲಾ ಜೊಲ್ಲೆ ಸೇರಿದಂತೆ ತಮ್ಮ ಮುಂದೆ ವಿಚಾರಣೆಗೆ ಅನುಮತಿ ಕೋರಿ ಬಾಕಿ ಇರುವ ಪ್ರಕರಣಗಳಲ್ಲೂ ಅನುಮತಿ ನೀಡಬೇಕು ಎಂದು ಮನವಿ ಮಾಡಲು ಕಾಂಗ್ರೆಸ್ ಪಕ್ಷದ ವತಿಯಿಂದ ಇಂದು ರಾಜಭವನ ಚಲೋ ಹಮ್ಮಿಕೊಳ್ಳಲಾಗಿದೆ.
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ರಾಜ್ಯದ ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಜನಾರ್ದನ ರೆಡ್ಡಿ, ಶಶಿಕಲಾ ಜೊಲ್ಲೆ ಅವರ ವಿರುದ್ಧ ತನಿಖೆಗೆ ಅನುಮತಿ ನೀಡಲು ಒತ್ತಾಯಿಸಿ ಮತ್ತು ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್ ಕೈಬಿಡಲು ಆಗ್ರಹಿಸಿ ರಾಜಭವನ ಚಲೋ ನಡೆಸಲಿದ್ದು, ಕಾಂಗ್ರೆಸ್ ಪಕ್ಷದ ಎಲ್ಲಾ ಸಂಸದರು, ಸಚಿವರು, ಶಾಸಕರು ಕೂಡ ಭಾಗಿಯಾಗಲಿದ್ದಾರೆ.
ಇಂದು ಬೆಳಗ್ಗೆ 10 ಗಂಟೆಗೆ ವಿಧಾನಸೌಧದ ಗಾಂಧಿ ಪ್ರತಿಮೆಯಿಂದ ರಾಜಭವನಕ್ಕೆ ತೆರಲಿ ಮನವಿ ಸಲ್ಲಿಸಲಾಗುವುದು. ಈ ವೇಳೆ ಮುಖ್ಯಮಂತ್ರಿಗಳು, ಎಲ್ಲಾ ಸಚಿವರು, ಕಾಂಗ್ರೆಸ್ ಶಾಸಕರು, ವಿಧಾನಪರಿಷತ್ ಸದಸ್ಯರು ಹಾಗೂ ಸಂಸದರು ಉಪಸ್ಥಿತರಿರಲಿದ್ದಾರೆ.