Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಂಜೆ 6 ಗಂಟೆಗೂ ಮೊದ್ಲು ಊಟ ಮಾಡೋದ್ರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ.? ಆರೋಗ್ಯ ರಹಸ್ಯವಿದು.!

07/06/2025 7:12 PM

BIG NEWS: ರಾಜ್ಯದಲ್ಲೊಂದು ವಿಚಿತ್ರ ಘಟನೆ: ದೇವಾಲಯದಲ್ಲಿ ಕಳ್ಳತನಕ್ಕೆ ಯತ್ನಿಸಿ ಕೊನೆಗೆ ಕದಿಯದೇ ಕೈಮುಗಿದು ತೆರಳಿದ ಮುಸುಕುಧಾರಿ

07/06/2025 6:57 PM

HD ಕುಮಾರಸ್ವಾಮಿ ಆರೋಗ್ಯ ಸುಧಾರಣೆ ಆಗುವುದಾದರೆ ನನ್ನನ್ನು ಟೀಕಿಸಲಿ: ಡಿಸಿಎಂ ಡಿ.ಕೆ.ಶಿವಕುಮಾರ್

07/06/2025 6:36 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದಲ್ಲಿ ಬಿಜೆಪಿಯವರು `ಆಫರೇಷನ್ ಕಮಲ’ ಕ್ಕೆ ಈಗಲೂ ಕೈ ಹಾಕಿದ್ದಾರೆ : ಸಿಎಂ ಸಿದ್ದರಾಮಯ್ಯ ಹೊಸ ಬಾಂಬ್
KARNATAKA

BIG NEWS : ರಾಜ್ಯದಲ್ಲಿ ಬಿಜೆಪಿಯವರು `ಆಫರೇಷನ್ ಕಮಲ’ ಕ್ಕೆ ಈಗಲೂ ಕೈ ಹಾಕಿದ್ದಾರೆ : ಸಿಎಂ ಸಿದ್ದರಾಮಯ್ಯ ಹೊಸ ಬಾಂಬ್

By kannadanewsnow5731/08/2024 6:32 AM

ಹುಬ್ಬಳ್ಳಿ : ರಾಜ್ಯದಲ್ಲಿ ಬಿಜೆಪಿಯವರು ಆಪರೇಷನ್ ಕಮಲಕ್ಕೆ ಈಗಲೂ ಕೈಹಾಕಿದ್ದು, 136 ಶಾಸಕರ ಬಲವಿರುವ ನಮ್ಮ ಸರ್ಕಾರವನ್ನು ಅಭದ್ರಗೊಳಿಸುವುದು ಸುಲಭದ ಮಾತಲ್ಲ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಪರೇಷನ್ ಕಮಲದ ಮೂಲಕ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದ್ದು, ನಮ್ಮ ಶಾಸಕರು ದುಡ್ಡಿನ ಆಸೆಗೆ ಬಲಿಯಾಗುವುದಿಲ್ಲ. ಬಿಜೆಪಿಯವರು ಈ ನಿಟ್ಟಿನಲ್ಲಿ ಪ್ರಯತ್ನಿಸುತ್ತಿರುವುದು ನಿಜ ಎಂದು ಶಾಸಕ ರವಿ ಗಣಿಗ ನನ್ನ ಬಳಿಯೂ ಹೇಳಿದ್ದಾರೆ. ರಾಜ್ಯದಲ್ಲಿ ಬಿಜೆಪಿಯವರು ಎಂದಿಗೂ ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬಾರದೇ, ಆಪರೇಷನ್ ಕಮಲ ಮಾಡಿ, ಹಿಂಬಾಗಿಲಿನಿಂದ 2008, 2018 ರಲ್ಲಿ ಅಧಿಕಾರಕ್ಕೆ ಬಂದಿದ್ದಾರೆ. ಬಿಜೆಪಿಯವರು ಇಂತಹ ಪ್ರಯತ್ನಕ್ಕೆ ಈಗಲೂ ಕೈಹಾಕಿದ್ದು, 136 ಶಾಸಕರ ಬಲವಿರುವ ನಮ್ಮ ಸರ್ಕಾರವನ್ನು ಅಭದ್ರಗೊಳಿಸುವುದು ಸುಲಭದ ಮಾತಲ್ಲ ಎಂದು ಹೇಳಿದ್ದಾರೆ.

ಬಿ.ವೈ. ವಿಜಯೇಂದ್ರ ಹೇಳಿದ್ದಾರೆ ಎಂದು ರಾಜೀನಾಮೆ ನೀಡಲು ಸಾಧ್ಯವೇ? ನಾಳೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದ್ದು, ಆದೇಶವನ್ನು ನಿರೀಕ್ಷಿಸಲಾಗಿದೆ. ನಾಳೆ ಸರ್ಕಾರದ ಎಲ್ಲ ಸಚಿವರು, ಶಾಸಕರು, ಪರಿಷತ್ ಸದಸ್ಯರು ರಾಜ್ಯಪಾಲರನ್ನು ಭೇಟಿ ಮಾಡಿ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ, ಶಶಿಕಲಾ ಜೊಲ್ಲೆ, ಜನಾರ್ಧನ ರೆಡ್ಡಿ ಹಾಗೂ ನಿರಾಣಿ ಮೇಲಿನ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಲು ಒತ್ತಾಯಿಸಲಿದ್ದಾರೆ. ಇವರೆಲ್ಲರ ಪ್ರಕರಣಗಳಲ್ಲಿ ವಿಚಾರಣೆಯಾಗಿ ಚಾರ್ಜ್ ಶೀಟ್ ಹಾಕುವ ಪ್ರಕ್ರಿಯೆ ಮಾತ್ರ ಬಾಕಿ ಇದ್ದು, ಅನುಮತಿ ಸಿಗಬೇಕಿದೆ ಎಂದು ತಿಳಿಸಿದ್ದಾರೆ.

ಮಹಾದಾಯಿ ಯೋಜನೆಗೆ ಚಾಲನೆ ನೀಡಲು ಸರ್ಕಾರ ಸಿದ್ಧವಿದೆ. ಆದರೆ ಕೇಂದ್ರದಿಂದ ಪರಿಸರ ತೀರುವಳಿ ನೀಡುವುದು ಬಾಕಿ ಇದ್ದು, ತೀರುವಳಿ ನೀಡಿದ ತಕ್ಷಣ ಕಾಮಗಾರಿ ಪ್ರಾರಂಭಿಸಲಾಗುವುದು. 16ನೇ ಹಣಕಾಸು ಆಯೋಗದವರೊಂದಿಗೆ ಸಭೆ ನಡೆದಿದ್ದು, ತೆರಿಗೆ ಹಂಚಿಕೆ ಹಾಗೂ ವಿಶೇಷ ಅನುದಾನಗಳ ಬಗ್ಗೆ ರಾಜ್ಯದ ನಿಲುವನ್ನು ಅವರಿಗೆ ಸ್ಪಷ್ಟಪಡಿಸಲಾಗಿದೆ. 15ನೇ ಹಣಕಾಸು ಆಯೋಗದಿಂದ ರಾಜ್ಯಕ್ಕೆ ಅನ್ಯಾಯವಾಗಿದ್ದರ ಬಗ್ಗೆ ನವದೆಹಲಿಯಲ್ಲಿ ಸರಕಾರ ಪ್ರತಿಭಟನೆ ನಡೆಸಿತ್ತು. ಆಯೋಗ ಶಿಫಾರಸ್ಸು ಮಾಡಿದ್ದ 11,495 ಕೋಟಿ ರೂ.ಗಳು ರಾಜ್ಯಕ್ಕೆ ಬಿಡುಗಡೆ ಆಗಿರಲಿಲ್ಲ. ರಾಜ್ಯಕ್ಕೆ ಹಂಚಿಕೆಯಾಗುತ್ತಿದ್ದ ತೆರಿಗೆ ಪ್ರಮಾಣ 4.713 ರಿಂದ 3.647 ಗೆ ಇಳಿದಿದ್ದು, 1.66 ರಷ್ಟು ಕಡಿಮೆಯಾಗಿದೆ. ಈ ಎಲ್ಲ ಕಾರಣಗಳಿಂದ ಕಳೆದ ಐದು ವರ್ಷಗಳಿಂದ ರಾಜ್ಯಕ್ಕೆ ಸುಮಾರು 80,000 ಕೋಟಿ ರೂ. ನಷ್ಟವಾಗಿದೆ. ಈ ಕೊರತೆಯನ್ನು ಸರಿದೂಗಿಸಲು ನಿನ್ನೆ ನಡೆದ ಸಭೆಯಲ್ಲಿ ಆಯೋಗದವರಿಗೆ ವಿವರಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

BIG NEWS : ರಾಜ್ಯದಲ್ಲಿ ಬಿಜೆಪಿಯವರು `ಆಫರೇಷನ್ ಕಮಲ' ಕ್ಕೆ ಈಗಲೂ ಕೈ ಹಾಕಿದ್ದಾರೆ : ಸಿಎಂ ಸಿದ್ದರಾಮಯ್ಯ ಹೊಸ ಬಾಂಬ್ BIG NEWS: BJP still working on 'Operation Kamala' in Karnataka: CM Siddaramaiah
Share. Facebook Twitter LinkedIn WhatsApp Email

Related Posts

BIG NEWS: ರಾಜ್ಯದಲ್ಲೊಂದು ವಿಚಿತ್ರ ಘಟನೆ: ದೇವಾಲಯದಲ್ಲಿ ಕಳ್ಳತನಕ್ಕೆ ಯತ್ನಿಸಿ ಕೊನೆಗೆ ಕದಿಯದೇ ಕೈಮುಗಿದು ತೆರಳಿದ ಮುಸುಕುಧಾರಿ

07/06/2025 6:57 PM1 Min Read

HD ಕುಮಾರಸ್ವಾಮಿ ಆರೋಗ್ಯ ಸುಧಾರಣೆ ಆಗುವುದಾದರೆ ನನ್ನನ್ನು ಟೀಕಿಸಲಿ: ಡಿಸಿಎಂ ಡಿ.ಕೆ.ಶಿವಕುಮಾರ್

07/06/2025 6:36 PM1 Min Read

GOOD NEWS: ರಾಜ್ಯದ ಭಾಗ್ಯಲಕ್ಷ್ಮೀ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: ಪರಿಪಕ್ವತೆ ಮೊತ್ತ ಮಂಜೂರು

07/06/2025 6:33 PM1 Min Read
Recent News

ಸಂಜೆ 6 ಗಂಟೆಗೂ ಮೊದ್ಲು ಊಟ ಮಾಡೋದ್ರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ.? ಆರೋಗ್ಯ ರಹಸ್ಯವಿದು.!

07/06/2025 7:12 PM

BIG NEWS: ರಾಜ್ಯದಲ್ಲೊಂದು ವಿಚಿತ್ರ ಘಟನೆ: ದೇವಾಲಯದಲ್ಲಿ ಕಳ್ಳತನಕ್ಕೆ ಯತ್ನಿಸಿ ಕೊನೆಗೆ ಕದಿಯದೇ ಕೈಮುಗಿದು ತೆರಳಿದ ಮುಸುಕುಧಾರಿ

07/06/2025 6:57 PM

HD ಕುಮಾರಸ್ವಾಮಿ ಆರೋಗ್ಯ ಸುಧಾರಣೆ ಆಗುವುದಾದರೆ ನನ್ನನ್ನು ಟೀಕಿಸಲಿ: ಡಿಸಿಎಂ ಡಿ.ಕೆ.ಶಿವಕುಮಾರ್

07/06/2025 6:36 PM

GOOD NEWS: ರಾಜ್ಯದ ಭಾಗ್ಯಲಕ್ಷ್ಮೀ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: ಪರಿಪಕ್ವತೆ ಮೊತ್ತ ಮಂಜೂರು

07/06/2025 6:33 PM
State News
KARNATAKA

BIG NEWS: ರಾಜ್ಯದಲ್ಲೊಂದು ವಿಚಿತ್ರ ಘಟನೆ: ದೇವಾಲಯದಲ್ಲಿ ಕಳ್ಳತನಕ್ಕೆ ಯತ್ನಿಸಿ ಕೊನೆಗೆ ಕದಿಯದೇ ಕೈಮುಗಿದು ತೆರಳಿದ ಮುಸುಕುಧಾರಿ

By kannadanewsnow0907/06/2025 6:57 PM KARNATAKA 1 Min Read

ಮಂಡ್ಯ : ದೇವಾಲಯದಲ್ಲಿ ಕಳ್ಳತನ ಮಾಡಲು ಬಂದಿದ್ದ ಮುಸುಕುಧಾರಿಯೊಬ್ಬ ಕೊನೆ ಕ್ಷಣದಲ್ಲಿ ಕಳ್ಳತನಕ್ಕೆ ಹೆದರಿ ದೇವರಿಗೆ ಕೈ ಮುಗಿದು ತೆರಳಿರುವ…

HD ಕುಮಾರಸ್ವಾಮಿ ಆರೋಗ್ಯ ಸುಧಾರಣೆ ಆಗುವುದಾದರೆ ನನ್ನನ್ನು ಟೀಕಿಸಲಿ: ಡಿಸಿಎಂ ಡಿ.ಕೆ.ಶಿವಕುಮಾರ್

07/06/2025 6:36 PM

GOOD NEWS: ರಾಜ್ಯದ ಭಾಗ್ಯಲಕ್ಷ್ಮೀ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: ಪರಿಪಕ್ವತೆ ಮೊತ್ತ ಮಂಜೂರು

07/06/2025 6:33 PM

ಬೆಂಗಳೂರು ಕಾಲ್ತುಳಿತ ದುರಂತ ಕೇಸಲ್ಲಿ ಎ1 ಸಿಎಂ, ಎ2 ಡಿಸಿಎಂ, ಎ3 ಗೃಹ ಸಚಿವರನ್ನು ಮಾಡಿ: ಅರಗ ಜ್ಞಾನೇಂದ್ರ ಆಗ್ರಹ

07/06/2025 6:22 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.