ಬೆಂಗಳೂರು : ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ರಾಜ್ಯದ ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಜನಾರ್ದನ ರೆಡ್ಡಿ, ಶಶಿಕಲಾ ಜೊಲ್ಲೆ ಅವರ ವಿರುದ್ಧ ತನಿಖೆಗೆ ಅನುಮತಿ ನೀಡುವಂತೆ ಕಾಂಗ್ರೆಸ್ ಇಂದು ದೂರು ನೀಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ರಾಜ್ಯ ಸಚಿವ ಸಂಪುಟದ ಇತರ ಸಚಿವರು ಮತ್ತು ಕಾಂಗ್ರೆಸ್ ಶಾಸಕರು ‘ರಾಜಭವನ ಚಲೋ’ ನಡೆಸಿ ರಾಜಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೂಟ್ ಅವರನ್ನು ಭೇಟಿಯಾಗಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ರಾಜ್ಯದ ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಜನಾರ್ದನ ರೆಡ್ಡಿ, ಶಶಿಕಲಾ ಜೊಲ್ಲೆ ವಿರುದ್ದಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ದೂರು ನೀಡಿದ್ದಾರೆ.
#WATCH | Bengaluru: Karnataka Congress leaders, led by state party chief and Deputy CM DK Shivakumar, march to Raj Bhavan in protest against Governor Thaawarchand Gehlot accusing him of biased behaviour against Congress. pic.twitter.com/vKjhdzlPaT
— ANI (@ANI) August 31, 2024
ರಾಜ್ಯಪಾಲರು ಕೇಂದ್ರ ಸಚಿವ ಕುಮಾರಸ್ವಾಮಿ, ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಜನಾರ್ದನ ರೆಡ್ಡಿ ಹಾಗೂ ಶಶಿಕಲಾ ಜೊಲ್ಲೆ ಸೇರಿದಂತೆ ತಮ್ಮ ಮುಂದೆ ವಿಚಾರಣೆಗೆ ಅನುಮತಿ ಕೋರಿ ಬಾಕಿ ಇರುವ ಪ್ರಕರಣಗಳಲ್ಲೂ ಅನುಮತಿ ನೀಡಬೇಕು ಎಂದು ಮನವಿ ಮಾಡಲು ಕಾಂಗ್ರೆಸ್ ಪಕ್ಷದ ವತಿಯಿಂದ ಇಂದು ರಾಜಭವನ ಚಲೋ ಹಮ್ಮಿಕೊಂಡಿತ್ತು.