ಬೆಂಗಳೂರು: ರಾಜ್ಯದ ಸರ್ಕಾರಿ ಶಾಲಾ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ ಎನ್ನುವಂತೆ ಸೆಪ್ಟೆಂಬರ್ ನಿಂದ ವಾರದಲ್ಲಿ 6 ದಿನವೂ ಮೊಟ್ಟೆ ವಿತರಣೆ ಮಾಡುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಸೆಪ್ಟೆಂಬರ್ ತಿಂಗಳಿನಿಂದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮಕ್ಕಳಿಗೆ ವಾರದ 6 ದಿನವೂ ಮೊಟ್ಟೆ ವಿತರಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಸೆಪ್ಟೆಂಬರ್ ತಿಂಗಳಿನಿಂದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮಕ್ಕಳಿಗೆ ವಾರದ 6 ದಿನವೂ ಮೊಟ್ಟೆ ವಿತರಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.@CMofKarnataka @siddaramaiah @Madhu_Bangarapp pic.twitter.com/CmuZWYhrDU
— DIPR Karnataka (@KarnatakaVarthe) August 31, 2024
ಮದ್ದೂರು ತಾಲೂಕಿನ ನಿಡಘಟ್ಟ ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ಶುಕ್ರವಾರ ದಿಢೀರ್ ಭೇಟಿ ನೀಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಕ್ಕಳೊಂದಿಗೆ ಸಂವಾದ ನಡೆಸಿದರು.
ಕಾರ್ಯಕ್ರಮ ನಿಮಿತ್ತ ಮಂಡ್ಯಗೆ ತೆರಳುತ್ತಿದ್ದ ಸಚಿವರನ್ನು ಮದ್ದೂರು ಶಾಸಕ ಕೆ.ಎಂ.ಉದಯ್ ಅವರ ಕೋರಿಕೆ ಮೇರೆಗೆ ನಿಡಘಟ್ಟ ಗ್ರಾಮದ ಸರ್ಕಾರಿ ಪ್ರಾಥಮಿಕ ಪಾಠಶಾಲೆ ಹಾಗೂ ಪ್ರೌಢಶಾಲೆಗಳಿಗೆ ಭೇಟಿ ನೀಡಿ ಕೊಠಡಿಗಳ ಅವ್ಯವಸ್ಥೆ ಹಾಗೂ ಸಮಸ್ಯೆ ಕುರಿತಂತೆ ಶಾಲಾ ಮಕ್ಕಳೊಂದಿಗೆ ಚರ್ಚಿಸಿದರು.
ನಂತರ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಶಾಲಾಭಿವೃದ್ಧಿ ಸಮಿತಿ ಸದಸ್ಯರೊಂದಿಗೆ ಮಾತುಕತೆ ನಡೆಸಿದ ಸಚಿವರು ಶಾಲೆಯ ಸಮಸ್ಯೆಗಳ ಬಗ್ಗೆ ಅಹವಾಲು ಆಲಿಸಿದರು.
ಬಳಿಕ ಮಕ್ಕಳೊಂದಿಗೆ ದಿನನಿತ್ಯ ನೀಡುವ ಬಿಸಿಯೂಟದ ಬಗ್ಗೆ ಮಾಹಿತಿ ಪಡೆದರು. ಮತ್ತೆ ವಾರಕ್ಕೆರಡು ಬಾರಿ ಕಡ್ಡಾಯವಾಗಿ ಶಾಲೆಯಲ್ಲಿ ಊಟದ ಜೊತೆ ಮೊಟ್ಟೆ ಹಾಗೂ ಬಾಳೆಹಣ್ಣು ನೀಡಲಾಗುತ್ತಿದೆ ಎಂಬ ಬಗ್ಗೆ ಸಚಿವರು ಮಕ್ಕಳಿಂದಲೇ ಮಾಹಿತಿ ಪಡೆದುಕೊಂಡರು.
ಬಳಿಕ ಶಾಲಾ ಆವರಣದಲ್ಲಿಯೇ ವಿದ್ಯಾರ್ಥಿಗಳೊಂದಿಗೆ ನೆಲದ ಮೇಲೆ ಕುಳಿತು ಸಹಪಂಕ್ತಿ ಭೋಜನ ಮಾಡಿದರು. ಸಚಿವರ ಆಗಮನದ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ಊಟದ ಸೊಪ್ಪಿನ ಪಲ್ಯ, ಅಪ್ಪಳ, ಮೊಟ್ಟೆ, ಮುದ್ದೆ, ಅನ್ನ, ತರಕಾರಿ ಸಾಂಬಾರ್, ರಸಂ, ಮಜ್ಜಿಗೆ ವ್ಯವಸ್ಥೆ ಮಾಡಲಾಗಿತ್ತು.
Good News: ಸೆಪ್ಟೆಂಬರ್.2ರಿಂದ ರಾಜ್ಯಾಧ್ಯಂತ ‘ಪೋಡಿ ದುರಸ್ತಿ’ ಅಭಿಯಾನ: ಸಚಿವ ಕೃಷ್ಣಭೈರೇಗೌಡ