ಬೆಂಗಳೂರು: ರಾಜ್ಯ ಸರ್ಕಾರದಿಂದ ಪಿಎಫ್ ಖಾತೆದಾರರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಅದೇ ಸಾಮಾನ್ಯ ಭವಿಷ್ಯ ನಿಧಿ ಖಾತೆಯಲ್ಲಿನ ಬಡ್ಡಿದರಗಳನ್ನು ಶೇ.7.1ಕ್ಕೆ ನಿಗದಿ ಪಡಿಸಲಾಗಿದೆ.
ಈ ಕುರಿತಂತೆ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಲಾಗಿದ್ದು, ಕರ್ನಾಟಕ ಸಾಮಾನ್ಯ ಭವಿಷ್ಯ ನಿಧಿ ವಂತಿಕೆದಾರರ ಸಾಮಾನ್ಯ ಭವಿಷ್ಯ ನಿಧಿ ಖಾತೆಯಲ್ಲಿ ಜಮೆಯಾಗಿರುವ ಶಿಲ್ಕಿನ ಮೇಲಿನ ಬಡ್ಡಿ ದರವನ್ನು ದಿನಾಂಕ 01-07-2024ರಿಂದ ದಿನಾಂಕ 30-09-2024ರವರೆಗಿನ ಅವಧಿಗೆ ವಾರ್ಷಿಕ ಶೇ.7.1ಕ್ಕೆ ನಿಗದಿಪಡಿಸಲಾಗಿದೆ ಎಂದಿದ್ದಾರೆ.