ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದಂತ ಕ್ರಮವನ್ನು ಕಾಂಗ್ರೆಸ್ ನಾಯಕರು ಖಂಡಿಸಿದ್ದಾರೆ. ಅಲ್ಲದೇ ಇದರ ವಿರುದ್ಧ ಸಚಿವ ಸಂಪುಟ ಸಭೆಯಲ್ಲಿ ಖಂಡನಾ ನಿರ್ಣಯವನ್ನು ಕೈಗೊಳ್ಳಲಾಗಿತ್ತು. ಈ ಬೆನ್ನಲ್ಲೇ ಯಾವುದೇ ಪ್ರಕರಣಗಳ ಪ್ರಾಸಿಕ್ಯೂಷನ್ ಅರ್ಜಿ ಬಾಕಿ ಇಲ್ಲ ಎಂಬುದಾಗಿ ರಾಜಭವನದ ಕಚೇರಿ ಸ್ಪಷ್ಟ ಪಡಿಸಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ರಾಜಭವನವು ಮಾಹಿತಿ ಬಿಡುಗಡೆ ಮಾಡಿದ್ದು, ಯಾವುದೇ ಪ್ರಕರಣಗಳ ಪ್ರಾಸಿಕ್ಯೂಷನ್ ಅರ್ಜಿಗಳು ಬಾಕಿ ಇಲ್ಲ ಎಂಬುದಾಗಿ ತಿಳಿಸಿದೆ. ಈ ಮೂಲಕ ರಾಜಭವನ ಚಲೋ ನಡೆಸಿದ್ದ ಬೆನ್ನಲ್ಲೇ ಅಚ್ಚರಿಯ ಮಾಹಿತಿ ರಾಜಭವನದಿಂದ ಹೊರ ಬಿದ್ದಿದೆ.
ಅಂದಹಾಗೇ ಕಾಂಗ್ರೆಸ್ ಪಕ್ಷದಿಂದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ಶಶಿಕಲಾ ಜೊಲ್ಲೆ, ಮುರುಗೇಶ ನಿರಾಣಿ, ಜನಾರ್ಧನ ರೆಡ್ಡಿ ವಿರುದ್ದದ ಪ್ರಕರಣಗಳಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿಯನ್ನೇ ನೀಡಿಲ್ಲ. ಆ ಪ್ರಕರಣಗಳಿಗೂ ಸಿದ್ಧರಾಮಯ್ಯ ವಿರುದ್ಧ ಅನುಮತಿ ನೀಡಿದಂತೆ ನೀಡುವಂತೆ ಆಗ್ರಹಿಸಲಾಗಿತ್ತು. ಈ ಬೆನ್ನಲ್ಲೇ ರಾಜಭವನದ ಈ ಸ್ಪಷ್ಟನೆ ಅಚ್ಚರಿಕೆ ಕಾರಣವಾಗಿದೆ.
ಸಿಎಂ ಸಿದ್ಧರಾಮಯ್ಯ ಟಗರು ಇದ್ದಂತೆ, ಯಾರಿಗೂ ಯಾವತ್ತಿಗೂ ಭಯ ಬೀಳೋದಿಲ್ಲ: ಸಚಿವ ಜಮೀರ್ ಅಹ್ಮದ್
ಅ. 1ರಂದು ಮೋದಿ ಅಂಡ್ ಕಂಪನಿಗೆ ಜಮ್ಮು-ಕಾಶ್ಮೀರದ ಯುವಕರು ನಿರ್ಗಮನ ದ್ವಾರ ತೋರಿಸಲಿದ್ದಾರೆ: ಖರ್ಗೆ