ಬೆಂಗಳೂರು : ಪ್ರತಿಯೊಬ್ಬರಿಗೂ ತಮ್ಮ ಜೀವನದ ಮೊದಲ ಬೈಕ್ ಜತೆಗೆ ವಿಶೇಷ ಬಾಂಧವ್ಯ, ಭಾವನಾತ್ಮಕ ಸಂಬಂಧ ಇರುತ್ತದೆ. ಬಹು ವರ್ಷಗಳ ನಂತರ ಮತ್ತೆ ತಮ್ಮ ಬೈಕ್ ಅನ್ನು ಕಂಡರೆ ನೂರೆಂಟು ನೆನಪುಗಳು ಗರಿ ಬಿಚ್ಚಿಕೊಳ್ಳುತ್ತವೆ. ಕಣ್ಮುಂದೆ ಹಾದು ಹೋಗುತ್ತವೆ. ಅಂತಹ ಘಳಿಗೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಭಾನುವಾರ ಸಾಕ್ಷಿಯಾದರು.
ವಿಂಟೇಜ್ ಬೈಕ್ ಪ್ರೇಮಿಯಾಗಿರುವ ಸುಪ್ರೀತ್ ಎಂಬುವವರು ಭಾನುವಾರ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಸದಾಶಿವನಗರ ನಿವಾಸಕ್ಕೆ ಡಿಸಿಎಂ ಅವರ ಅವರು ಕಾಲೇಜು ದಿನಗಳಲ್ಲಿ ಬಳಸಿದ್ದ ಯಜ್ಡಿ (Yezde) ಬೈಕ್ (ನಂಬರ್ CAE 7684) ಅನ್ನು ಮರುವಿನ್ಯಾಸ ಮಾಡಿ ಸದಾಶಿವನಗರದ ನಿವಾಸಕ್ಕೆ ತಂದು ನಿಲ್ಲಿಸಿದಾಗ ಅದನ್ನು ಕಂಡ ಶಿವಕುಮಾರ್ ಅವರು ಪುಳಕಿತರಾದರು.
ಕಾಲೇಜ್ ಡೇಸ್ ನಲ್ಲಿ ಬೈಕ್ ಕ್ರೇಜ್ ಸಾಮಾನ್ಯ,
ನನ್ನ ಕಾಲೇಜು ದಿನಗಳಲ್ಲಿ ಓಡಿಸಿದ ಬೈಕ್ ಕೆಲ ವರ್ಷಗಳಿಂದ ಧೂಳು ಹಿಡಿದಿತ್ತು, ವಿಂಟೇಜ್ ಬೈಕ್ ಪ್ರೇಮಿಯಾದ ಸುಪ್ರಿತ್ ಎನ್ನುವ ಯುವಕ ಸಂಪೂರ್ಣವಾಗಿ ಮರು ನವೀಕರಣ ಮಾಡಿ ಇಂದು ನನಗೆ ಹಸ್ತಾಂತರಿಸಿದರು. ನನ್ನ ಮೊದಲ ಬೈಕ್ ಇದು, ಇದರೊಂದಿಗೆ ಸಾವಿರಾರು ನೆನಪುಗಳು ಬೆಸೆದುಕೊಂಡಿವೆ. ಆ ನೆನಪಿನ… pic.twitter.com/GPydcWJ6LI— DK Shivakumar (@DKShivakumar) September 1, 2024
ತಾವೇ ಬೈಕ್ ಕಿಕ್ ಮಾಡಿ ಸ್ಟಾರ್ಟ್ ಮಾಡಿ ಖುಷಿಪಟ್ಟರು. “ನಾನು ಕಾಲೇಜು ದಿನಗಳಲ್ಲಿ ಬಳಸುತ್ತಿದ್ದ ಬೈಕ್ ಇದು, ಕನಕಪುರದ ಮನೆಯಲ್ಲಿ ಧೂಳು ಹಿಡಿದಿತ್ತು. ಸುಮಾರು 40 ವರ್ಷಗಳ ನಂತರ ನನ್ನ ಸ್ನೇಹಿತರು ಅದಕ್ಕೆ ಹೊಸ ರೂಪ ಕೊಟ್ಟು ತಂದಿದ್ದಾರೆ” ಎಂದು ಆನಂದ ತುಂದಿಲರಾದರು.
ಬೆಂಗಳೂರಿನ BEMLನಲ್ಲಿ ಭಾರತದ ಮೊದಲ ‘ವಂದೇ ಭಾರತ್ ಸ್ಲೀಪರ್ ಟ್ರೈನ್ ಸೆಟ್’ಗೆ ಕೇಂದ್ರ ರೈಲ್ವೆ ಸಚಿವ ಅನಾವರಣ
ಮಹಿಳೆಯರಿಗೆ ‘ಉಚಿತ LPG ಸಿಲಿಂಡರ್’: ಅರ್ಜಿ ಸಲ್ಲಿಕೆ, ಅರ್ಹತಾ ಮಾನದಂಡ, ದಾಖಲೆಗಳೇನು? ಇಲ್ಲಿದೆ ಮಾಹಿತಿ