ಬೆಂಗಳೂರು: ಚಿಕ್ಕಮಗಳೂರಿನ ಪಶ್ಚಿಮ ಘಟ್ಟ ವ್ಯಾಪ್ತಿಯ ಆನೆ ಕಾರಿಡಾರ್ ಕಾಡಿನೊಳೆಗೆ ಅಕ್ರಮವಾಗಿ ಪ್ರವೇಶಿಸಿ ಪೋರ್ ವೀಲ್ ಡ್ರೈವ್ Rally ನಡೆಸಿದಂತವರ ವಿರುದ್ಧ ಖಡಕ್ ಕಾನೂನು ಕ್ರಮ ಕೈಗೊಳ್ಳುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚಿಸಿದ್ದಾರೆ.
ಈ ಸಂಬಂಧ ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದಿರುವಂತ ಅವರು, ಅದರಲ್ಲಿ ಪಶ್ಚಿಮಘಟ್ಟ ಮತ್ತು ಅರಣ್ಯ ಮೋಜು, ಮಸ್ತಿಯ ತಾಣಗಳಲ್ಲ. ಈ ಪ್ರದೇಶದಲ್ಲಿ ನೂರಾರು ಪ್ರಭೇದದ ಖಗ, ಮೃಗ, ಕೀಟ, ಸಸ್ಯ ಸಂಕುಲ ಇರುತ್ತದೆ. ಇವುಗಳೆಲ್ಲದರ ಸಂರಕ್ಷಣೆಯ ಹೊಣೆ ಅರಣ್ಯ ಇಲಾಖೆಯ ಮೇಲಿದೆ. ಆದರೆ, ದಿ.31.08.2024ರಂದು ಮೂಡಿಗೆರೆ ತಾಲೂಕು ಬಾಳೂರು ಸಮೀಪದ ಬೈರಾಪುರ ಹೊಸಕೆರೆಯ 9 ಗುಡ್ಡಗಳ ವ್ಯಾಪ್ತಿಯಲ್ಲಿ ಅದೂ ಆನೆ ಕಾರಿಡಾ ಇರುವ ಕಾಡಿನೊಳಗೆ ಅಕ್ರಮವಾಗಿ ಪ್ರವೇಶಿಸಿ, ಫೋರ್ ವೀಲ್ ಡ್ರೈವ್ ವಾಹನಗಳ rally ನಡೆಸಲಾಗಿದೆ ಎಂದು ಮಾಧ್ಯಮಗಳಲ್ಲಿ ವರಿದಗಳು ಪ್ರಕಟವಾಗಿದ್ದು, ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದಿದ್ದಾರೆ.
ಈ rallyಯಲ್ಲಿ ಸುಮಾರು 52 ವಾಹನಗಳು ಭಾಗಿಯಾಗಿದ್ದವು ಎಂಬ ಮಾಹಿತಿ ಇದ್ದು, ಈ rallyಯಿಂದ ಪರಿಸರದ ಹಾನಿಯ ಬಗ್ಗೆ ಸಿಸಿಎಫ್ ದರ್ಜೆಯ ಅಧಿಕಾರಿಯಿಂದ ಪರಿಶೀಲನೆ ನಡೆಸಿ, ಅರಣ್ಯದೊಳಗೆ rallyಯಲ್ಲಿ ನಡೆದಿದ್ದಲ್ಲಿ ಅರಣ್ಯ ಸಂರಕ್ಷಣಾ ಕಾಯಿದೆ ಮತ್ತು ವನ್ಯಜೀವಿ ಸಂರಕ್ಷಣಾ ಕಾಯಿದೆಯಡಿ ಪ್ರಕರಣ ದಾಖಲಿಸಲು ಮತ್ತು ಪರಿಸರ ಸಂರಕ್ಷಣಾ ಕಾಯಿದೆ ಅಡಿಯಲ್ಲಿ ಸಾರ್ವಜನಿಕರ ನೆಮ್ಮದಿ ಭಂಗ ಪ್ರಕರಣ ದಾಖಲಿಸಲು ತುರ್ತು ಕ್ರಮ ವಹಿಸುವಂತೆ ಖಡಕ್ ಸೂಚನೆ ನೀಡಿದ್ದಾರೆ.
ಸಾಲ ಸೌಲಭ್ಯ, ಸಹಾಯಧನ, ಕೊಳವೆ ಬಾವಿ, ಕಾಲೇಜು ಶುಲ್ಕಕ್ಕೆ ನೆರವು: ಕ್ಷೇತ್ರದ ಜನರ ಸಮಸ್ಯೆಗಳಿಗೆ ಸ್ಪಂದಿಸಿದ ಡಿಕೆಶಿ
ಮಹಿಳೆಯರಿಗೆ ‘ಉಚಿತ LPG ಸಿಲಿಂಡರ್’: ಅರ್ಜಿ ಸಲ್ಲಿಕೆ, ಅರ್ಹತಾ ಮಾನದಂಡ, ದಾಖಲೆಗಳೇನು? ಇಲ್ಲಿದೆ ಮಾಹಿತಿ