Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಗೃಹಲಕ್ಷ್ಮಿ ಯೋಜನೆಯ ಆಸರೆ : ಹಿಟ್ಟಿನ ಗಿರಣಿ ಆರಂಭಿಸಿ ಸ್ವಾವಲಂಬಿಯಾದ ವಿಜಯಪುರದ ಮಹಿಳೆ.!

BREAKING : ರಾಜ್ಯ ಚುನಾವಣಾ ರಾಜಕೀಯಕ್ಕೆ ‘ಹಳ್ಳಿಹಕ್ಕಿ’ ಹೆಚ್. ವಿಶ್ವನಾಥ್ ನಿವೃತ್ತಿ ಘೋಷಣೆ | H. Vishwanath Retirement

ಕೊಪ್ಪಳದಲ್ಲಿ ಲವ್ ಜಿಹಾದ್ ಆರೋಪ : ಮುಸ್ಲಿಂ ಯುವಕನಿಗೆ ಥಳಿಸಿದ, 8 ಜನ ಹಿಂದೂ ಮುಖಂಡರು ಖಾಕಿ ವಶಕ್ಕೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಆಸ್ತಿ ಖರೀದಿ, ಮಾರಾಟಗಾರರಿಗೆ ಗುಡ್ ನ್ಯೂಸ್ : ಇಂದಿನಿಂದ ರಾಜ್ಯದಲ್ಲಿ ‘ಎನಿವೇರ್ ನೋಂದಣಿ’ ವ್ಯವಸ್ಥೆ ಜಾರಿ!
KARNATAKA

ಆಸ್ತಿ ಖರೀದಿ, ಮಾರಾಟಗಾರರಿಗೆ ಗುಡ್ ನ್ಯೂಸ್ : ಇಂದಿನಿಂದ ರಾಜ್ಯದಲ್ಲಿ ‘ಎನಿವೇರ್ ನೋಂದಣಿ’ ವ್ಯವಸ್ಥೆ ಜಾರಿ!

By kannadanewsnow57

ಬೆಂಗಳೂರು : ಆಸ್ತಿ ಖರೀದಿ, ಮಾರಾಟಗಾರರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಎನಿವೇರ್ ಆಸ್ತಿ ನೋಂದಣಿ ಯೋಜನೆಯನ್ನು ಸೆಪ್ಟೆಂಬರ್ 02 ರ ಇಂದಿನಿಂದ ಜಾರಿಗೆ ತರಲಾಗಿದ್ದು, ಈ ಮೂಲಕ ಎನಿವೇರ್ ನೋಂದಣಿ ವ್ಯವಸ್ಥೆಯ ಅಡಿ ಯಾವುದೇ ವ್ಯಕ್ತಿಯು ನೋಂದಣಿ ದಸ್ತಾವೇಜನ್ನು ಜಿಲ್ಲೆಯ ವ್ಯಾಪ್ತಿಯ ಯಾವುದಾದರೂ ಉಪನೋಂದಣಿ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ.

ರಾಜ್ಯ ವಿಧಾನಸಭೆಯ ಅಂದಾಜು ಸಮಿತಿಯು ನೋಂದಣಿ ಇಲಾಖೆ ನೀಡುವ ‘ಎನಿವೇರ್ ನೋಂದಣಿ’ ಸೇವೆಯನ್ನು ರಾಜ್ಯ ಮಟ್ಟದ ಕಾರ್ಯವಿಧಾನವಾಗಿ ವಿಸ್ತರಿಸುವುದಕ್ಕೆ ಮುಂದಾಗಿದೆ. ಸಾರ್ವಜನಿಕರು ಸ್ಥಿರಾಸ್ತಿ ನೋಂದಣಿಗಾಗಿ ನಿರ್ದಿಷ್ಟ ಉಪ ನೋಂದಣಿ ಕಚೇರಿಗೆ ಭೇಟಿ ನೀಡದೇ, ಮತ್ತಾವುದೇ ಸಬ್‌ ರಿಜಿಸ್ಟ್ರಾರ್‌ ಕಚೇರಿಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಬಹುದಾದ ‘ಎನಿವೇರ್‌ ನೋಂದಣಿ’ ವ್ಯವಸ್ಥೆ ಸೆಪ್ಟೆಂಬರ್‌ 2 ರಿಂದ ರಾಜಾದ್ಯಂತ ಜಾರಿಯಾಗಲಿದೆ.

ಎನಿವೇರ್ ನೋಂದಣಿ ವ್ಯವಸ್ಥೆಯ ಅಡಿ ಯಾವುದೇ ವ್ಯಕ್ತಿಯು ನೋಂದಣಿ ದಸ್ತಾವೇಜನ್ನು ಜಿಲ್ಲೆಯ ವ್ಯಾಪ್ತಿಯ ಯಾವುದಾದರೂ ಉಪನೋಂದಣಿ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ. ‘ ಎನಿವೇರ್‌ ನೋಂದಣಿ ‘ ವ್ಯವಸ್ಥೆಯಿಂದ ಸಾರ್ವಜನಿಕರಿಗೆ ಬಹು ಕಚೇರಿ ಆಯ್ಕೆ ಸಿಗಲಿದ್ದು, ಒಂದೇ ಕಚೇರಿಯನ್ನು ಅವಲಂಬಿಸಬೇಕಾದ ಅನಿವಾರ್ಯತೆ ಇರುವುದಿಲ್ಲ.

ಏನಿದು ಏನಿವೇರ್‌ ರಿಜಿಸ್ಟ್ರೇಷನ್?

ಯಾವುದೇ ವ್ಯಕ್ತಿಯು ನೋಂದಣಿ ದಸ್ತಾವೇಜನ್ನು ಜನ ಸಂದಣಿ ಇಲ್ಲದ ಜಿಲ್ಲೆಯ ವ್ಯಾಪ್ತಿಯ ಯಾವುದಾದರೂ ಉಪನೋಂದಣಿ ಕಚೇರಿಯಲ್ಲಿ ತಮ್ಮ ಆಸ್ತಿ ದಸ್ತಾವೇಜನ್ನು ನೋಂದಾಯಿಸಿಕೊಳ್ಳಲು “ಎನಿವೇರ್‌ ರಿಜಿಸ್ಟ್ರೇಷನ್” ವ್ಯವಸ್ಥೆಯ ಅಡಿಯಲ್ಲಿ ಸರ್ಕಾರ/ಕಂದಾಯ ಇಲಾಖೆ ಅವಕಾಶ ಮಾಡಿಕೊಟ್ಟಿದೆ.

ದಸ್ತಾವೇಜುಗಳ ನೋಂದಣಿಗಳಲ್ಲಿನ ವಿಳಂಬ ತಡೆಗಟ್ಟಿ ನೋಂದಣಿ ಪ್ರಕ್ರಿಯೆಯನ್ನು ಸುಲಭಗೊಳಿಸುವ, ಸಬ್‌ ರಿಜಿಸ್ಟ್ರಾರ್‌ ಕಚೇರಿ ಎದುರು ಜನರಿಗೆ ಕಾಯುವ ಶೋಷಣೆಯಿಂದ ಮುಕ್ತಿ ನೀಡುವ ಹಾಗೂ ಕಚೇರಿ ಸಿಬ್ಬಂದಿಗಳ ಮೇಲೆ ಕೆಲಸದ ಒತ್ತಡ ಕಡಿಮೆ ಮಾಡುವ ಉದ್ದೇಶದಿಂದ ಎನಿವೇರ್‌ ರಿಜಿಸ್ಟ್ರೇಷನ್‌ ವ್ಯವಸ್ಥೆಯನ್ನು ಜಾರಿಗೆ ತರಲಾಯ್ತು.

ಈ ವ್ಯವಸ್ಥೆಯನ್ನು ಪ್ರಾಯೋಗಿಕವಾಗಿ ಮೊದಲು ಬೆಂಗಳೂರು ನಗರ ಜಿಲ್ಲೆಯ ಗಾಂಧಿನಗರ, ಬಸವನಗುಡಿ, ಜಯನಗರ, ಶಿವಾಜಿನಗರ ಹಾಗೂ ರಾಜಾಜಿನಗರ ಜಿಲ್ಲಾ ನೋಂದಣಿ ಕಚೇರಿಯ ವ್ಯಾಪ್ತಿಯ ಉಪನೋಂದಣಿ ಕಚೇರಿಗಳಲ್ಲಿ ಜಾರಿಗೆ ತರಲಾಗಿತ್ತು.

ಈ ಯೋಜನೆಯ ಮೂಲಕ ಆಸ್ತಿ ನೋಂದಣಿ ಸಮಯದಲ್ಲಿ ಜನಸಾಮಾನ್ಯರು ಬೆಂಗಳೂರು ನಗರದ ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಯ ಯಾವುದಾದರೂ ಉಪನೋಂದಣಿ ಕಚೇರಿಯಲ್ಲಿ ಆಸ್ತಿ ನೋಂದಣಿ ಮಾಡಿಕೊಳ್ಳಲು ನೋಂದಣಿ ಕಾಯ್ದೆ-1908ರ ಕಲಂ (5) ಹಾಗೂ ಕಲಂ (6) ರಡಿಯಲ್ಲಿ ಅನುವು ಮಾಡಿಕೊಡಲಾಗಿತ್ತು.

ಎನಿವೇರ್ ನೋಂದಣಿ ವ್ಯವಸ್ಥೆಯು ಬೆಂಗಳೂರು ನಗರ ಜಿಲ್ಲೆಯಲ್ಲಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿದೆ. ಜನ ಸಾಮಾನ್ಯರಿಗೆ ನೋಂದಣಿ ವಿಚಾರದಲ್ಲಿ ತ್ವರಿತ ಸೇವೆ ನೀಡಲು ಈ ಯೋಜನೆ ಸಹಕಾರಿಯಾಗಿದೆ. ಜನರೂ ಇದರ ಉಪಯೋಗವನ್ನು ಬಳಸಿಕೊಳ್ಳುತ್ತಿದ್ದಾರೆ. ಇದೇ ಕಾರಣಕ್ಕೆ ಈ ಯೋಜನೆಯನ್ನು ಇದೀಗ ರಾಜ್ಯಾದ್ಯಂತ ವಿಸ್ತರಿಸಲು ಸರ್ಕಾರ ಒಂದು ಹೆಜ್ಜೆ ಮುಂದೆ ಇಟ್ಟಿದೆ ಎಂದು ಕೃಷ್ಣ ಬೈರೇಗೌಡ ತಿಳಿಸಿದರು.

ಈ ನೂತನ ಯೋಜನೆಯು ಸಾರ್ವಜನಿಕರಿಗೆ ಉಪಯುಕ್ತ ವ್ಯವಸ್ಥೆಯಾಗಿರಲಿದೆ. ದಸ್ತಾವೇಜಿನ ನೋಂದಣಿಯಲ್ಲಿ ಪಾರದರ್ಶಕತೆಯನ್ನು ಹೆಚ್ಚಿಸುತ್ತದೆ. ಮತ್ತು ನೋಂದಣಿ ಪ್ರಕ್ರಿಯೆಯಲ್ಲಿ ವಿಳಂಬವನ್ನು ತಡೆಗಟ್ಟಿ ಸಾರ್ವಜನಿಕರ ಸಮಯ ಉಳಿಸಿ ಕಚೇರಿಯ ಜನದಟ್ಟಣೆಯನ್ನು ನಿಯಂತ್ರಿಸುತ್ತದೆ. ಅಲ್ಲದೆ, ಕಚೇರಿ ನೋಂದಣಿ ಕೆಲಸವನ್ನೂ ಜಿಲ್ಲೆಯಾದ್ಯಂತ ಎಲ್ಲ ಕಚೇರಿಗಳಿಗೂ ಸಮಾನವಾಗಿ ಹಂಚಿಕೆ ಮಾಡಲು ಈ ಯೋಜನೆ ಸಹಕಾರಿಯಾಗಿರಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು.

Good news for property buyers sellers: 'Anywhere registration' system to be implemented in the state from today ಆಸ್ತಿ ಖರೀದಿ ಮಾರಾಟಗಾರರಿಗೆ ಗುಡ್ ನ್ಯೂಸ್ : ಇಂದಿನಿಂದ ರಾಜ್ಯದಲ್ಲಿ ‘ಎನಿವೇರ್ ನೋಂದಣಿ’ ವ್ಯವಸ್ಥೆ ಜಾರಿ!
Share. Facebook Twitter LinkedIn WhatsApp Email

Related Posts

ಗೃಹಲಕ್ಷ್ಮಿ ಯೋಜನೆಯ ಆಸರೆ : ಹಿಟ್ಟಿನ ಗಿರಣಿ ಆರಂಭಿಸಿ ಸ್ವಾವಲಂಬಿಯಾದ ವಿಜಯಪುರದ ಮಹಿಳೆ.!

1 Min Read

BREAKING : ರಾಜ್ಯ ಚುನಾವಣಾ ರಾಜಕೀಯಕ್ಕೆ ‘ಹಳ್ಳಿಹಕ್ಕಿ’ ಹೆಚ್. ವಿಶ್ವನಾಥ್ ನಿವೃತ್ತಿ ಘೋಷಣೆ | H. Vishwanath Retirement

1 Min Read

ಕೊಪ್ಪಳದಲ್ಲಿ ಲವ್ ಜಿಹಾದ್ ಆರೋಪ : ಮುಸ್ಲಿಂ ಯುವಕನಿಗೆ ಥಳಿಸಿದ, 8 ಜನ ಹಿಂದೂ ಮುಖಂಡರು ಖಾಕಿ ವಶಕ್ಕೆ!

1 Min Read
Recent News

ಗೃಹಲಕ್ಷ್ಮಿ ಯೋಜನೆಯ ಆಸರೆ : ಹಿಟ್ಟಿನ ಗಿರಣಿ ಆರಂಭಿಸಿ ಸ್ವಾವಲಂಬಿಯಾದ ವಿಜಯಪುರದ ಮಹಿಳೆ.!

BREAKING : ರಾಜ್ಯ ಚುನಾವಣಾ ರಾಜಕೀಯಕ್ಕೆ ‘ಹಳ್ಳಿಹಕ್ಕಿ’ ಹೆಚ್. ವಿಶ್ವನಾಥ್ ನಿವೃತ್ತಿ ಘೋಷಣೆ | H. Vishwanath Retirement

ಕೊಪ್ಪಳದಲ್ಲಿ ಲವ್ ಜಿಹಾದ್ ಆರೋಪ : ಮುಸ್ಲಿಂ ಯುವಕನಿಗೆ ಥಳಿಸಿದ, 8 ಜನ ಹಿಂದೂ ಮುಖಂಡರು ಖಾಕಿ ವಶಕ್ಕೆ!

ಬಾಕ್ಸ್ ಆಫೀಸ್‌ನಲ್ಲಿ ‘ಲವ್ ಮಾಕ್ಟೇಲ್-3’ ಅಬ್ಬರ: ಯಶಸ್ವಿಯಾಗಿ 50 ದಿನ ಪೂರೈಸಿದ ಡಾರ್ಲಿಂಗ್ ಕೃಷ್ಣ ಸಿನಿಮಾ!

State News
KARNATAKA

ಗೃಹಲಕ್ಷ್ಮಿ ಯೋಜನೆಯ ಆಸರೆ : ಹಿಟ್ಟಿನ ಗಿರಣಿ ಆರಂಭಿಸಿ ಸ್ವಾವಲಂಬಿಯಾದ ವಿಜಯಪುರದ ಮಹಿಳೆ.!

By kannadanewsnow57 KARNATAKA 1 Min Read

ವಿಜಯಪುರ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯು ನಾಡಿನ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಪೂರಕವಾಗುತ್ತಿದೆ ಎಂಬುದಕ್ಕೆ ವಿಜಯಪುರ ಜಿಲ್ಲೆಯ ಈ…

BREAKING : ರಾಜ್ಯ ಚುನಾವಣಾ ರಾಜಕೀಯಕ್ಕೆ ‘ಹಳ್ಳಿಹಕ್ಕಿ’ ಹೆಚ್. ವಿಶ್ವನಾಥ್ ನಿವೃತ್ತಿ ಘೋಷಣೆ | H. Vishwanath Retirement

ಕೊಪ್ಪಳದಲ್ಲಿ ಲವ್ ಜಿಹಾದ್ ಆರೋಪ : ಮುಸ್ಲಿಂ ಯುವಕನಿಗೆ ಥಳಿಸಿದ, 8 ಜನ ಹಿಂದೂ ಮುಖಂಡರು ಖಾಕಿ ವಶಕ್ಕೆ!

BIG NEWS : ಕಾರವಾರದಲ್ಲಿ ಘೋರ ದುರಂತ : ಸಮುದ್ರದ ಅಲೆಗೆ ಸಿಲುಕಿ ಇಬ್ಬರು ಯುವಕರು ಜಲಸಮಾಧಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.