ಕೋಲಾರ : ಕೋಲಾರದಲ್ಲೊಂದು ಪೈಶಾಚಿಕ ಕೃತ್ಯವೊಂದು ಬೆಳಕಿಗೆ ಬಂದಿದ್ದು, ಹಸುಗಳ ಮೇಲೆ ಆ್ಯಸಿಡ್ ಹಾಗೂ ಕಾದ ಎಣ್ಣೆ ಸುರಿದು ಕಿಡಿಗೇಡಿಗಳು ವಿಕೃತಿ ಮೆರೆದಿರುವ ಘಟನೆ ನಡೆದಿದೆ.
ಕೋಲಾರದ ರೆಹಮತ್ ನಗರದಲ್ಲಿ ಕಿಡಿಗೇಡಿಗಳು ಹಸುಗಳ ಮೇಲೆ ಆ್ಯಸಿಡ್ ಹಾಗೂ ಕಾದ ಎಣ್ಣೆ ಸುರಿದು ವಿಕೃತಿ ಮೆರೆದಿರುವ ಘಟನೆ ನಡೆದಿದೆ. ಕಿಡಿಗೇಡಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಕಿಡಿಗೇಡಿಗಳ ವಿರುದ್ಧ ಬಂಧಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಆದೇಶಿಸಲಾಗಿದೆ.
ಸದ್ಯ ಗಾಯಗೊಮಡ ಹಸುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕಿಡಿಗೇಡಿಗಳ ಬಂಧಿಸಿ ಕ್ರಮಕೈಗೊಳ್ಳುವಂತೆ ಬಜರಂಗದಳದ ಮುಖಂಡರು ಕೋಲಾರದ ಗಲ್ ಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.