ಬೆಂಗಳೂರು: ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣದ ಬಗ್ಗೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರೇ, ಇನ್ನುಳಿದ ಪ್ರಾಸಿಕ್ಯೂಷನ್ ಗಾಗಿ ಅರ್ಜಿ ಸಲ್ಲಿಸಿರುವುದಕ್ಕೂ ಪ್ರತಿಕ್ರಿಯಿಸುವಂತೆ ಕಾಂಗ್ರೆಸ್ ನಾಯಕರು ಆಗ್ರಹಿಸಿದ್ದರು. ರಾಜಭವನ ಚಲೋ ಕೂಡ ನಡೆಸಿ, ಮನವಿ ಮಾಡಿದ್ದರು. ಈ ಬೆನ್ನಲ್ಲೇ ಇನ್ನಷ್ಟು ಸ್ಪಷ್ಟನೆ ಬಯಸಿರುವಂತ ರಾಜ್ಯಪಾಲರು, ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಪ್ರಾಸಿಕ್ಯೂಷನ್ ಕಡತವನ್ನು ಲೋಕಾಯುಕ್ತಕ್ಕೆ ವಾಪಾಸ್ ಕಳುಹಿಸಿದ್ದಾರೆ.
ಈ ಕುರಿತಂತೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಮಾಹಿತಿ ಹಂಚಿಕೊಂಡಿದ್ದು, ಲೋಕಾಯುಕ್ತದವರು ಹೆಚ್.ಡಿ ಕುಮಾರಸ್ವಾಮಿ ವಿರುದ್ಧದ ಪ್ರಕರಣದ ಸಂಬಂಧ ಪ್ರಾಸಿಕ್ಯೂಷನ್ ಗೆ ಅನುಮತಿಗಾಗಿ ರಾಜ್ಯಪಾಲರಲ್ಲಿ ಮನವಿ ಮಾಡಿದ್ದರು. ಆ ಲೋಕಾಯುಕ್ತದ ಕಡತವನ್ನು ರಾಜ್ಯಪಾಲರು ವಾಪಾಸ್ ಕಳುಹಿಸಿದ್ದಾರೆ. ಅದಕ್ಕೆ ಲೋಕಾಯುಕ್ತ ಸ್ಪಷ್ಟನೆ ನೀಡಲಿದ್ದಾರೆ ಎಂದು ಹೇಳಿದ್ದಾರೆ.
ರಾಜ್ಯಪಾಲರು ಒಂದು ಕಡತ ಮಾತ್ರ ಇದೆ ಎಂಬುದಾಗಿ ಶನಿವಾರ ತಿಳಿಸಿದ್ದರು. ಅದು ಹೆಚ್.ಡಿ ಕುಮಾರಸ್ವಾಮಿ ಅವರದ್ದು ಎಂಬುದು ಈಗ ಗೊತ್ತಾಗಿದೆ. ಅದಕ್ಕಾದರೂ ಕ್ರಮ ತೆಗೆದುಕೊಳ್ಳಲೇಬೇಕಲ್ಲವೇ? ಕಾನೂನು ರೀತಿ ಇದೆಯೇ? ಕಾನೂನು ಬಾಹಿರವಾಗಿದೆಯೇ ಎಂಬುದನ್ನು ಲೋಕಾಯುಕ್ತರು ತಿಳಿಸಿದ್ದಾರೆ. ಅದನ್ನು ಆಧರಿಸಿ ಕ್ರಮ ತೆಗೆದುಕೊಳ್ಳಬೇಕು ಎಂದರು.
BREAKING : ‘ಮನಿ ಲಾಂಡರಿಂಗ್’ ಕೇಸ್ : ‘ED’ ಯಿಂದ AAP ಶಾಸಕ ‘ಅಮಾನತುಲ್ಲಾ ಖಾನ್’ ಅರೆಸ್ಟ್!