ಬೆಂಗಳೂರು : ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಿಜೆಪಿ ಮುಖಂಡ ಅರುಣ್ ಕುಮಾರ್ ಕುಮಾರ್ ಪುತ್ತಿಲ್ ಗೆ ಜಾಮೀನು ಮಂಜೂರು ಮಾಡಲಾಗಿದೆ. ಈ ಕುರಿತು ಅರುಣ್ ಕುಮಾರ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ JMFC ಕೋರ್ಟ್, ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.
ಪ್ರಕರಣ ಸಂಬಂಧ ಕೋರ್ಟಿಗೆ ಅರುಣ್ ಕುಮಾರ್ ಪುತ್ತಿಲ್ ಹಾಜರಾಗಿದ್ದರು. ಈ ವೇಳೆ ವಕೀಲರ ಮೂಲಕ ಅರುಣ್ ಕುಮಾರ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅರುಣ್ ಕುಮಾರ್ ಪುತ್ತಿಲ್ ಪರ ವಕೀಲರ ವಾದ ಪುರಸ್ಕರಿಸಿ ಇದೀಗ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಪುತ್ತೂರಿನ ಪ್ರಧಾನ ಸಿವಿಲ್ ಜಡ್ಜ್ ಹಾಗೂ ಜೆಎಂಎಫ್ ಸಿ ಕೋರ್ಟ್ ಈ ಕುರಿತು ಆದೇಶ ಹೊರಡಿಸಿದೆ.
ಪ್ರಕರಣದ ಹಿನ್ನೆಲೆ?
ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಡಿ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಎಫ್ಐಆರ್ ದಾಖಲಾಗಿತ್ತು. 47 ವರ್ಷದ ಮಹಿಳೆ ನೀಡಿದ ದೂರಿನ ಅನ್ವಯ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಅರುಣ್ ಕುಮಾರ್ ಪುತ್ತಿಲ ಬೆಂಗಳೂರಿನ ಹೋಟೆಲ್ವೊಂದರಲ್ಲಿ 2023ರ ಜೂನ್ನಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂದು ಭಾನುವಾರ ಮಹಿಳೆ ದೂರು ನೀಡಿದ್ದರು. ದೌರ್ಜನ್ಯ ಎಸಗಿರುವ ಸಂದರ್ಭದ ಫೋಟೋ, ಸೆಲ್ಫಿ ಹಾಗೂ ವಿಡಿಯೋಗಳನ್ನು ಇಟ್ಟುಕೊಂಡು ಬ್ಲಾಕ್ಮೇಲ್ ಮಾಡುತ್ತಿದ್ದಾರೆಂದು ಅವರು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಐಪಿಸಿ 417, 354A, 506 ಸೆಕ್ಷನ್ಗಳಡಿಯಲ್ಲಿ ಪೊಲೀಸರು ಪ್ರಕರಣ ದಾಖಲಾಗಿತ್ತು.