ರಾಮನಗರ : ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿದ್ದರಿಂದ ರಸ್ತೆ ಬದಿಯ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರಿಗೆ ಸಣ್ಣ ಪುಟ್ಟ ಗಾಯಗಳಾಗಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಚೋಳಮಾರನಹಳ್ಳಿ ಗ್ರಾಮದ ಬಳಿ ನಡೆದಿದೆ.ನಡೆದಿದೆ.
ಇನ್ನು ಅದೇ ಮಾರ್ಗದಲ್ಲಿ ಬರುತ್ತಿದ್ದ ಮೈಸೂರಿನ ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾಗಿದ್ದಾರೆ. ಅಂಬುಲೆನ್ಸ್ ಕರೆಸಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಮೈಸೂರು ಕಡೆಯಿಂದ ಬೆಂಗಳೂರು ಕಡೆಗೆ ಹೊರಟಿದ್ದ ಕಾರು ವೇಗವಾಗಿ ಬಂದ ಪರಿಣಾಮ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿಯಾಗಿದೆ.
ಡಿಕ್ಕಿ ರಭಸಕ್ಕೆ ಸರ್ವಿಸ್ ರಸ್ತೆಗೆ ಉರುಳಿಬಿದ್ದ ಕಾರು, ಸಂಪೂರ್ಣ ಜಖಂಗೊಂಡಿದೆ. ಕಾರಿನಲ್ಲಿದ್ದ ಕೇರಳ ಮೂಲದ ಕುಟುಂಬಕ್ಕೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಇಬ್ಬರು ಮಕ್ಕಳು ಸೇರಿ ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಈ ಸಂಬಂಧ ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.