ಬೆಂಗಳೂರು : ರಾಜ್ಯ ಸರ್ಕಾರವು ಗೃಹಲಕ್ಷ್ಮಿ, ಶಕ್ತಿ ಯೋಜನೆ ಸೇರಿ ಐದು ಗ್ಯಾರಂಟಿ ಯೋಜನೆಗಳಿಗೆ 52,009 ಕೋಟಿ ರೂ.ಗಳನ್ನು ಗ್ಯಾರಂಟಿ ಯೋಜನೆಗಳಿಗೆ ಮೀಸಲಿಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಹಿಂದೆ ನಾನು ಸಿಎಂ ಆಗಿದ್ದಾಗ, ಅನ್ನಭಾಗ್ಯ, ಶಾದಿ ಭಾಗ್ಯ, ಶೂ ಭಾಗ್ಯ, ಇಂದಿರಾ ಕ್ಯಾಂಟೀನ್, ಮನಸ್ವಿನಿ ಸೇರಿದಂತೆ ಹಲವು ಜನಪರ ಯೋಜನೆಗಳನ್ನು ಜಾರಿಗೊಳಿಸಿದ್ದೆ. ಯಾವುದೇ ಜಾತಿ – ಧರ್ಮದ ಬಡವರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬಿ ಮುಖ್ಯವಾಹಿನಿಗಿ ಬರುವಂತಾಗಲು ಐದು ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಜಾರಿಗೊಳಿಸಿದೆ. 52,009 ಕೋಟಿ ರೂ.ಗಳನ್ನು ಗ್ಯಾರಂಟಿ ಯೋಜನೆಗಳಿಗೆ ಮೀಸಲಿಡಲಾಗಿದೆ ಎಂದು ತಿಳಿಸಿದ್ದಾರೆ.
ಬಿಜೆಪಿಯವರು ಬಡವರಪರ ನಾವು ಕೆಲಸ ಮಾಡುವುದನ್ನು ಸಹಿಸುವುದಿಲ್ಲ. ಬಡವರು ಶಕ್ತಿವಂತರಾದರೆ, ಅವರ ಮೇಲೆ ಶೋಷಣೆ ಮಾಡಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಅವರು ಸುಳ್ಳನ್ನು ಸತ್ಯ ಮಾಡಲು ಹೊರಟಿದ್ದಾರೆ. ಹಿಟ್ಲರ್ ಕಾಲದಲ್ಲಿ ಸುಳ್ಳು ಹೇಳಲೆಂದೇ ಒಬ್ಬ ಮಂತ್ರಿಯಿದ್ದಂತೆ, ಈಗ ವಿಪಕ್ಷ ನಾಯಕರು ಸುಳ್ಳು ಹೇಳುವುದನ್ನೇ ಕಾಯಕ ಮಾಡಿಕೊಂಡಿದ್ದಾರೆ. ಸಾಮಾಜಿಕ ನ್ಯಾಯವನ್ನು ಕೇಳಬಾರದೆಂಬುದೇ ಇಂತಹ ಪಟ್ಟಭದ್ರ ಹಿತಾಸಕ್ತಿಗಳ ಆಶಯವಾಗಿದೆ. ಜನರ ಆಶೀರ್ವಾದವಿರುವವರೆಗೆ ಸಿದ್ದರಾಮಯ್ಯನನ್ನು ಅಲುಗಾಡಿಸಲು ಸಾಧ್ಯವಿಲ್ಲ. ನಮ್ಮ ಸರ್ಕಾರ ಬಡವರಪರ ಕೆಲಸದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ