ಬೆಂಗಳೂರು : 2 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಪಿಡಿಒ ರೇಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕುಂದಾಣಿ ಗ್ರಾಮದಲ್ಲಿ ನಡೆದಿದೆ.
ಹೌದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕುಂದಾಣಿ ಗ್ರಾಮ ಪಂಚಾಯಿತಿ ಪಿಡಿಒ ಪದ್ಮನಾಭ ಇದೀಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಬಳಗೆ ಬಿದ್ದಿದ್ದಾನೆ. ಗ್ರಾಮ ಪಂಚಾಯಿತಿ ಪಿಡಿಎ ಪದ್ಮನಾಭ ಲೇಔಟ್ ನಲ್ಲಿ ಕೇಬಲ್ ಅಳವಡಿಸಲು 5 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ.
ಈಗಾಗಲೇ ಮುಂಗಡವಾಗಿ 3 ಲಕ್ಷ ರೂಪಾಯಿ ಲಂಚ ಪಡೆದಿದ್ದ ಇಂದು 2 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಪಿಡಿಓ ಪದ್ಮನಾಭ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾನೆ. ಸದ್ಯ ಪಿಡಿಓ ಪದ್ಮನಾಭನನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.