ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ನಟ ದರ್ಶನ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, A2 ಆರೋಪಿಯಿಂದ A1 ಆರೋಪಿಯನ್ನಾಗಿ ಮಾಡಲು ಇದೀಗ ಪೊಲೀಸರು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳಲಾಗಿದೆ.
ಹೌದು ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ದರ್ಶನ್ ಅವರು ಕಳೆದ 3 ತಿಂಗಳಿನಿಂದ ಜೈಲಿನಲ್ಲಿ ಇದ್ದಾರೆ. ಈ ಒಂದು ಪ್ರಕರಣದಲ್ಲಿ ಪವಿತ್ರ ಗೌಡಾಳನ್ನು A1 ಆರೋಪಿನ್ನಾಗಿ ಮಾಡಲಾಗಿದ್ದು, ದರ್ಶನ ಅವರನ್ನು A2 ಆರೋಪಿನ್ನಾಗಿ ಪ್ರಕರಣ ದಾಖಲಾಗಿತ್ತು. ಇದೀಗ ನಟ ದರ್ಶನ್ ಅವರನ್ನು A2 ನಿಂದ A1 ಆರೋಪಿಯನ್ನಾಗಿ ಮಾಡಿ ಚಾರ್ಜ್ ಸಲ್ಲಿಕೆಗೆ ಪೊಲೀಸರು ಸಿದ್ಧತೆ ನಡೆಸುತ್ತಿದ್ದಾರೆ. ಪ್ರಕರಣದ ತನಿಖೆ ವೇಳೆ ನಟ ದರ್ಶನ ಅವರನ್ನು A2 ಆರೋಪಿಯನ್ನಾಗಿ ಮಾಡಲಾಗಿತ್ತು. ಅಲ್ಲದೆ ಪವಿತ್ರ ಗೌಡರನ್ನು ಮೊದಲ ಆರೋಪಿ ಮಾಡಲಾಗಿತ್ತು. ಹಾಗಾಗಿ ಇದೀಗ ನಟ ದರ್ಶನ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ದರ್ಶನ್, ಪವಿತ್ರಗೌಡ ಸೇರಿ ಎಲ್ಲಾ 17 ಆರೋಪಿಗಳ ವಿರುದ್ಧ ಇದೀಗ ಪೊಲೀಸರು 4500 ಪುಟಗಳಷ್ಟು ಚಾರ್ಜ್ಶೀಟ್ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದ್ದು ಇಂದು ದೋಷಾರೋಪಣೆ ಪಟ್ಟಿ ಸಲ್ಲಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಹೌದು ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಇದೆ ಸೆಪ್ಟೆಂಬರ್ 9 ಕ್ಕೆ 3 ತಿಂಗಳು ತುಂಬಲಿವೆ. ಈಗಾಗಲೇ 4500 ಪುಟಗಳ ಚಾರ್ಜ್ಶೀಟ್ ಮುಕ್ತಾಯಗೊಂಡಿದ್ದು, ಇಂದು ಸಲ್ಲಿಕೆ ಮಾಡುವ ಸಾಧ್ಯತೆ ದಟ್ಟವಾಗಿದೆ. ಅಪರಾಧಿಗಳಿಗೆ ತಪ್ಪಿಸಿಕೊಳ್ಳಲು ಅವಕಾಶವಾಗಬಾರದೆಂದು ಕಾನೂನು ತಜ್ಞರ ಸಲಹೆಯನ್ನೂ ಪಡೆಯಲಾಗಿದೆ. ಎರಡ್ಮೂರು ಬಾರಿ ಪರಿಶೀಲನೆಯನ್ನೂ ನಡೆಸಲಾಗಿದೆ. 200 ಕ್ಕೂ ಅಧಿಕ ಸಾಕ್ಷಿಗಳ ಹೇಳಿಕೆಗಳನ್ನು ಉಲ್ಲೇಖಿಸಲಾಗಿದೆ.