ಬೆಂಗಳೂರು: ರಾಜ್ಯದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ರಾಜ್ಯಾಧ್ಯಂತ ಆಧುನಿಕ ಮಾದರಿಯಲ್ಲಿ 17 ಸಾವಿರ ಅಂಗನವಾಡಿ ಕೇಂದ್ರಗಳನ್ನು ಸ್ಥಾಪನೆ ಮಾಡುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಘೋಷಿಸಿದ್ದಾರೆ.
ರಾಜ್ಯದಲ್ಲಿ ಮುಂದಿನ ವರ್ಷಗಳಲ್ಲಿ ಆಧುನಿಕ ಮಾದರಿಯಲ್ಲಿ 17 ಸಾವಿರ ಅಂಗನವಾಡಿ ಕೇಂದ್ರ ತೆರೆಯಲು ಕೇಂದ್ರ ಸರ್ಕಾರ ಮಂಜೂರಾತಿ ನೀಡಿದ್ದು, ಅದಕ್ಕಾಗಿ 104 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಮುಂದಿನ ದಿನಗಳಲ್ಲಿ ಅಂಗನವಾಡಿ ಕೇಂದ್ರಗಳಲ್ಲೇ ಎಲ್‌ಕೆಜಿ, ಯುಕೆಜಿ ಆರಂಭಿಸಲು ಉದ್ದೇಶಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.
234 ಅಂಗನವಾಡಿ ಕೇಂದ್ರಗಳಲ್ಲಿ ಸರ್ಕಾರಿ ಮಾಂಟೆಸ್ಸರಿ
ತುಮಕೂರು ಜಿಲ್ಲೆಯಲ್ಲಿ 234 ಅಂಗನವಾಡಿ ಕೇಂದ್ರಗಳಲ್ಲಿ ಸರ್ಕಾರಿ ಮಾಂಟೆಸ್ಸರಿ ಆರಂಭಿಸಲಾಗುವುದು. ತುಮಕೂರು ನಗರದಲ್ಲಿ ಸಿಎ ಸೈಟ್ ಸಿಕ್ಕರೆ ಅಂಗನವಾಡಿ ಕಟ್ಟಡಗಳನ್ನು ನಿರ್ಮಿಸಲು ಇಲಾಖೆಯ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.
ಅಂಗನವಾಡಿ ಕಾರ್ಯಕರ್ತೆಯರಿಗೆ ಸಂಬಳ ಆಗದ ವಿಚಾರ
ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಅನುದಾನದಲ್ಲಿ ಸಂಬಳ ಕೊಡಲಾಗುತ್ತದೆ. ಈ ರೀತಿಯ ಸಮಸ್ಯೆ ಆಗುತ್ತಿರುವುದು ಇದೇ ಮೊದಲಲ್ಲ. ಕೇಂದ್ರ ಸರ್ಕಾರ ಬಿಡುಗಡೆ ಮಾಡಿದಾಗ ನಾವು ರಾಜ್ಯ ಸರ್ಕಾರದ ಮೊತ್ತ ಸೇರಿಸಿ ಸಂಬಳ ನೀಡಬೇಕಾಗುತ್ತದೆ. ಕೇಂದ್ರದಿಂದ ಹಣ ಇನ್ನೂ ಬಂದಿಲ್ಲ. ಈಗಾಗಲೇ ನಾವು ಮೂರು ನಾಲ್ಕು ಬಾರಿ ಪತ್ರ ಬರೆದಿದ್ದೇವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ನಮ್ಮ ಇಲಾಖೆ ನಿರ್ದೇಶಕರು ಮೊನ್ನೆಯಷ್ಟೇ ದೆಹಲಿಗೆ ಹೋಗಿ ಬಂದಿದ್ದಾರೆ. ಆದಷ್ಟು ಬೇಗ ನೀಡಲಾಗುವುದು. ಗಣಪತಿ ಹಬ್ಬದ ಒಳಗೆ ಸಂಬಳ ನೀಡುವ ಪ್ರಯತ್ನಿಸಲಾಗುವುದು ಎಂದರು.
ನಮ್ಮ ಇಲಾಖೆಯಲ್ಲಿ ಬಹಳಷ್ಟು ಯೋಜನೆಗಳಿಗೆ ಎರಡೂ ಸರ್ಕಾರದ ಅನುದಾನ ಬಳಕೆ ಆಗುತ್ತದೆ. ವಿಳಂಬ ಮೊದಲಿನಿಂದಲೂ ಆಗಿದೆ, ಇನ್ಮುಂದೆ ಈ ರೀತಿ ಆಗದ ಹಾಗೆ ನೋಡಿಕೊಳ್ಳಲಾಗುವುದು ಎಂದರು.
ರಾಜ್ಯದಲ್ಲಿ ಮುಂದಿನ ವರ್ಷಗಳಲ್ಲಿ ಆಧುನಿಕ ಮಾದರಿಯಲ್ಲಿ 17 ಸಾವಿರ ಅಂಗನವಾಡಿ ಕೇಂದ್ರ ತೆರೆಯಲು ಕೇಂದ್ರ ಸರ್ಕಾರ ಮಂಜೂರಾತಿ ನೀಡಿದ್ದು, ಅದಕ್ಕಾಗಿ 104 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಮುಂದಿನ ದಿನಗಳಲ್ಲಿ ಅಂಗನವಾಡಿ ಕೇಂದ್ರಗಳಲ್ಲೇ ಎಲ್‌ಕೆಜಿ, ಯುಕೆಜಿ ಆರಂಭಿಸಲು ಉದ್ದೇಶಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ… pic.twitter.com/GKXrLEztt5
— DIPR Karnataka (@KarnatakaVarthe) September 4, 2024
BREAKING: ಮೈಸೂರಿನ ಮುಡಾ ಅಧ್ಯಕ್ಷ ಕೆ.ಮರಿಗೌಡ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು
ರೈತರಿಗೆ ಮಹತ್ವದ ಮಾಹಿತಿ: ಕೃಷಿ ಪ್ರಶಸ್ತಿ ಯೋಜನೆಯಡಿ ಮುಂಗಾರು ಹಂಗಾಮಿನ ವಿವಿಧ ಬೆಳೆಗಳ ಸ್ಪರ್ಧೆಗೆ ಅರ್ಜಿ ಆಹ್ವಾನ
BREAKING : ಕುಸ್ತಿಪಟು ವಿನೇಶ್ ಪೋಗಾಟ್, ಭಜರಂಗ್ ಪೂನಿಯಾ ಕಾಂಗ್ರೆಸ್ ಸೇರ್ಪಡೆ | Joining Congress