ಶಿವಮೊಗ್ಗ : ಮಕ್ಕಳನ್ನು ಒಬ್ಬಂಟಿಯಾಗಿ ಆಟವಾಡಲು ಬಿಡುವ ಪೋಷಕರೇ ಎಚ್ಚರ, ಆಟವಾಡುವಾಗ ಜ್ಯೂಸ್ ಬಾಟಲ್ ನ ಮುಚ್ಚಳ ನುಂಗಿ ಒಂದೂವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಹರಗುವಳ್ಳಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದ್ದು, ವೇದಮೂರ್ತಿ ಗಂಗಾಧರಯ್ಯ ಶಾಸ್ತ್ರಿ ಎಂಬುವರ ಮಗ ಮನೆಯಲ್ಲಿ ಆಟವಾಡುತ್ತಿದ್ದ ಮಗುವೊಂದು ಅಲ್ಲೇ ಬಿದ್ದಿದ್ದ ಜ್ಯೂಸ್ ಬಾಟಲಿಯ ಮುಚ್ಚಳ ನುಂಗಿದ್ದು, ಕೂಡಲೇ ಉಸಿರಾಟದ ಸಮಸ್ಯೆಯಿಂದ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.