ಬೆಂಗಳೂರು: ಅಶ್ವಿನಿ ಪುನೀತ್ ರಾಜ್ ಕುಮಾರ್ ಬಗ್ಗೆ ಡೀಫ್ ಪೇಕ್ ವೀಡಿಯೋ, ಪೋಟೋಗಳನ್ನು ಎಡಿಟ್ ಮಾಡಿ ಅವಹೇಳನಕಾರಿ ಟ್ರೋಲ್ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅವರ ಅಭಿಮಾನಿಗಳ ಸಂಘದಿಂದ ಫಿಲ್ಮಂ ಚೇಂಬರ್ ಅಧ್ಯಕ್ಷರಿಗೆ ದೂರು ನೀಡಲಾಗಿದೆ.
ಇಂದು ಫಿಲ್ಮಂ ಚೇಂಬರ್ ಅಧ್ಯಕ್ಷ ಎನ್ ಎಂ ಸುರೇಶ್ ಅವರನ್ನು ಭೇಟಿಯಾಗಿರುವಂತ ರಾಜವಂಶ ಅಭಿಮಾನಿಗಳ ಸಂಘದ ಅಧ್ಯಕ್ಷರು, ಸದಸ್ಯರು ಕಿಡಿಗೇಡಿಗಳು ನಕಲಿ ಖಾತೆಯ ಮೂಲಕ ಅಶ್ವಿನಿ ಪುನೀತ್ ರಾಜ್ ಕುಮಾರ್ ಫೇಕ್ ವೀಡಿಯೋ ಹರಿ ಬಿಟ್ಟಿದ್ದಾರೆ. ಇವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.
ನಕಲಿ ಫೇಸ್ ಬುಕ್ ಖಾತೆಯಿಂದ ವೀಡಿಯೋ ವೈರಲ್ ಆಗಿದೆ. ರಾಜ್ ಕುಟುಂಬ, ನಟ ನಟಿಯರ ಪೋಟೋ, ವೀಡಿಯೋ ವೈರಲ್ ಮಾಡಲಾಗುತ್ತಿದೆ. ಕೂಡಲೇ ಕ್ರಮವಹಿಸಿ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಪತ್ರದಲ್ಲಿ ಆಗ್ರಹಿಸಲಾಗಿದೆ.
ಇದೇ ಸಂದರ್ಭದಲ್ಲಿ ಸೋಷಿಯಲ್ ಮೀಡಿಯಾಗಳಿಗೆ ಆಧಾರ್ ಲಿಂಕ್ ಕಡ್ಡಾಯ ಮಾಡುವಂತೆಯೂ ಕೇಂದ್ರ ಸರ್ಕಾರಕ್ಕೆ ರಾಜವಂಶ ಅಭಿಮಾನಿಗಳ ಸಂಘದಿಂದ ಒತ್ತಾಯಿಸಲಾಯಿತು.