ಮಂಗಳೂರು : ನಡು ರಸ್ತೆಯಲ್ಲೇ ಚಲಿಸುತ್ತಿದ್ದ BMW ಕಾರೊಂದು ಆಕಸ್ಮಿಕ ಬೆಂಕಿಯಿಂದ ಹೊತ್ತಿ ಉರಿದಿರುವ ಘಟನೆ ಮಂಗಳೂರಿನ ರಾಷ್ಟ್ರೀಯ ಹೆದ್ದಾರಿಯ ಸುರತ್ಕಲ್ ಎನ್ಐಟಿಕೆ ಹಳೆ ಟೋಲ್ ಗೇಟ್ ಬಳಿ ಇಂದು ಬೆಳಗ್ಗೆ ನಡೆದಿದೆ.
ಹೌದು ಬಿಎಂಡಬ್ಲ್ಯೂ ಕಂಪನಿಯ ಕಾರು ಸುಟ್ಟು ಕರಕಲಾದ ಕಾರು ಎಂದು ಹೇಳಲಾಗುತ್ತಿದ್ದು, ಕಾರು ಉಡುಪಿ ಕಡೆಯಿಂದ ರಾಷ್ಟ್ರೀಯ ಹೆದ್ದಾರಿಯಾಗಿ ಮಂಗಳೂರು ಕಡೆ ತೆರಳುತ್ತಿತ್ತು. ಎನ್ಐಟಿಕೆಯ ಬಳಿ ಏಕಾಏಕಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಭಸ್ಮವಾಗಿದೆ.
ಅದೃಷ್ಟವಶಾತ್ ಬೆಂಕಿ ಅವಘಡದಲ್ಲಿ ಯಾರಿಗೂ ಅಪಾಯವಾಗಿಲ್ಲ. ಕೂಡಲೇ ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ಪೊಲೀಸರು, ಸುರತ್ಕಲ್ ಠಾಣೆಯ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಅಗ್ನಿ ಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಲು ಶ್ರಮಿಸಿದರು.