ಬೆಂಗಳೂರು : ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ 1,242 ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆ ಆರಂಭವಾಗಿದ್ದು, ಸಿಎಂ ಸಿದ್ದರಾಮಯ್ಯ ಐವರಿಗೆ ನೇಮಕಾತಿ ಆದೇಶ ಪ್ರತಿ ವಿತರಿಸಿದ್ದಾರೆ.
2021 ರಲ್ಲಿ 1,242 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಪರೀಕ್ಷೆ ಆರಂಭದಿಂದಲೂ ನೇಮಕಾತಿ ಆದೇಶದವರೆಗೂ ಒಂದು ಒಂದು ಸಮಸ್ಯೆ ಎದುರಾಗಿತ್ತು. ಇಂದಿಗೂ ಮೀಸಲಾತಿ ವಿಚಾರವಾಗಿ ಪ್ರಕರಣ ಕೋರ್ಟ್ ನಲ್ಲಿದ್ದು, ಈ ಮೀಸಲಾತಿ ಹೊರತಾಗಿರುವ 1,001 ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಪತ್ರ ವಿತರಣೆಗೆ ಚಾಲನೆ ನೀಡಲಾಗಿದೆ.
ಕಾಲೇಜು ಶಿಕ್ಷಣ ಇಲಾಖೆಯ ಆಡಳಿತ ವ್ಯಾಪ್ತಿಗೆ ಒಳಪಡುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ವಿವಿಧ ವಿಷಯಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇರ ನೇಮಕಾತಿಗೆ ಆಯ್ಕೆ ಪ್ರಾಧಿಕಾರವಾದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ. ಸರ್ಕಾರಕ್ಕೆ ಸಲ್ಲಿಸಿದ : 92 22 2023 (2), ದಿನಾಂಕ:03.11.2023 ರಲ್ಲಿ ಪ್ರಕಟಿಸಿದ. ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ಕಾಲೇಜು ಶಿಕ್ಷಣ ಇಲಾಖೆ) (ಸಹಾಯಕ ಪ್ರಾಧ್ಯಾಪಕರ ನೇಮಕಾತಿ) (ವಿಶೇಷ) ನಿಯಮಗಳು, 2020 ನಿಯಮ 9 ರ ಉಪನಿಯಮ (2) ಮತ್ತು (3) ರನ್ನಯ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಅಂತಿಮ ಆಯ್ಕೆ ಪಟ್ಟಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಅರ್ಹತೆಯ ದೃಢೀಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ವಿಚಾರಣೆಗಳು ಪೂರ್ಣಗೊಂಡಿರುವ ಈ ಕೆಳಕಂಡ ಅಭ್ಯರ್ಥಿಗಳನ್ನು ವೇತನ ಶ್ರೇಣಿ ರೂ.57700- 182400 (ಯುಜಿಸಿ ವೇತನ ಶ್ರೇಣಿ) ರ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ನೇಮಿಸಿ ಆದೇಶಿಸಿದೆ.