ರಾಮನಗರ : ರಾಮನಗರದಲ್ಲಿ ಬೆಳ್ಳಂಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿಗೆ ಬೈಕ್ ಡಿಕ್ಕಿಯಾಗಿ ಮೂವರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ರಾಮನಗರ ತಾಲೂಕಿನ ಮಾಯಗಾನಹಳ್ಳಿ ಬಳಿಯ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೈವೆಯ ಸರ್ವೀಸ್ ರಸ್ತೆಯಲ್ಲಿ ಲಾರಿಗೆ ಬೈಕ್ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ್ದಾರೆ. ಮೃತರನ್ನು ಗುರುಮೂರ್ತಿ (39), ಶೇಕ್ ಅಫೀಸ್ (45), ವೆಂಕಟೇಶ್ (50) ಎಂದು ಗುರುತಿಸಲಾಗಿದೆ.
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೈವೆಯ ಸರ್ವೀಸ್ ರಸ್ತೆಯಲ್ಲಿ ಅಪಘಾತ ನಡೆದಿದೆ. ಈ ನಾಲ್ವರು ಗಾರೆ ಕೆಲಸಕ್ಕೆಂದು ಒಂದೇ ಬೈಕ್ ನಲ್ಲಿ ರಾಮನಗರದಿಂದ ಬಿಡದಿ ಕಡೆಗೆ ಹೋಗುತ್ತಿದ್ದ ಈ ವೇಳೆ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವು ಕಂಡಿದ್ದಾರೆ. ಓರ್ವ ಯುವಕನಿಗೆ ಗಂಭೀರ ಗಾಯವಾಗಿದೆ. ರಾಮನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.